ನಿಗದಿತ ವೇಳೆಗೆ ಹೊಗೇನಕಲ್ ಪೂರ್ಣ
ಚೆನ್ನೈ,
ಏ. 23 : ಹೊಗೇನಕಲ್ ಕುಡಿಯುವ ನೀರಿನ ಯೋಜನೆ ಕಾಮಗಾರಿ ನಿಗದಿತ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ತಮಿಳುನಾಡು ಉಪಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸ್ಪಷ್ಟಪಡಿಸಿದ್ದಾರೆ. id="toptextpromo">ತಮಿಳುನಾಡಿನ
ವಿದಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಪ್ರತಿಪಕ್ಷದ ಸದಸ್ಯರಿಂದ ಪ್ರಶ್ನೆಗೆ ಉತ್ತರಿಸಿದ ಅವರು, ಹೊಗೇನಕಲ್ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಸರಕಾರ ಬದ್ಧವಾಗಿದೆ ಎಂದರು. ಹೊಗೇನಕಲ್ ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರಕಾರ ಹೊಗೇನಕಲ್ ಯೋಜನೆಯಲ್ಲಿ 2.4 ಟಿಎಂಸಿ ನೀರನ್ನು ಬಳಸಿಕೊಳ್ಳುತ್ತಿದೆ ಎಂದು ಕರ್ನಾಟಕ ನೀರಾವರಿ ಸಚಿವ ಬಸವರಾಜ ಮಾಡಿರುವ ಆರೋಪವನ್ನು ತಳ್ಳಿಹಾಕಿದ ಸ್ಟಾಲಿನ್, ತಮಿಳುನಾಡು ಕೇವಲ 1.4 ಟಿಎಂಸಿ ನೀರನ್ನು ಮಾತ್ರ ಬಳಸಿಕೊಳ್ಳಲಿದೆ ಎಂದು ಅವರು ಸ್ಪಷ್ಟಪಡಿಸಿದರು. id='are-slot-1' class='oiad oi-axt oiadv'> id='top-searched-articles'>ಯೋಜನೆಗೆ
ಸಂಬಂಧಿಸಿದಂತೆ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳುವ ಹಂತಕ್ಕೆ ತಲುಪಿವೆ. ಯೋಜನೆಗೆ ಕರ್ನಾಟಕದ ಯಾವ ಭಾಗವನ್ನೂ ತಮಿಳುನಾಡು ಅತಿಕ್ರಮಣ ಮಾಡಿಕೊಂಡಿಲ್ಲ ಎಂದು ಅವರು ಸದನಕ್ಕೆ ವಿವರಿಸಿದರು.











Click it and Unblock the Notifications