ಗ್ರಾಮೀಣ ಜನರ ವಲಸೆ ಅಭಿವೃದ್ಧಿಯ ಸಂಕೇತ

ಜಾಗತಿಕ ಅದ್ಯಯನ ಸಂಸ್ಥೆ ಮೆಕಿನ್ಸಿ ಗ್ಲೋಬಲ್ ನಡೆಸಿರುವ ಅಧ್ಯಯನದ ಪ್ರಕಾರ, 2030ರ ಹೊತ್ತಿಗೆ ನಗರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು 97.35 ಲಕ್ಷ ಕೋಟಿ ರುಪಾಯಿಗಳನ್ನು (2.2 ಟ್ರಿಲಿಯನ್ ಡಾಲರ್) ಖರ್ಚು ಮಾಡಬೇಕಿದೆ ಎಂದು ಹೇಳಿದೆ. ಇದರಲ್ಲಿ ಸುಮಾರು 53.1 ಲಕ್ಷ ಕೋಟಿ ರುಪಾಯಿಗಳನ್ನು ಕುಡಿಯುವ ನೀರು, ಒಳ ಚರಂಡಿ, ಸಾರಿಗೆ ಹಾಗೂ ಮಿತವ್ಯಯದ ಮನೆಗಳ ನಿರ್ಮಾಣಕ್ಕೆ ವೆಚ್ಚ ಮಾಡಬೇಕಾಗಿದೆ. ಇನ್ನೆರಡು ದಶಕಗಳಲ್ಲಿ ಸುಮಾರು 1.47 ಟ್ರಿಲಿಯನ್ ಜನ ನಗರಗಳಲ್ಲಿ ವಾಸ ಮಾಡಲಿದ್ದಾರೆ ಎಂದು ಸಂಸ್ಥೆ ಅಂದಾಜಿಸಿದೆ.
ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ಜನರ ವಲಸೆ ಅಭಿವೃದ್ದಿ ಹೊಂದುತ್ತಿರುವ ದೇಶಗಳ ಲಕ್ಷಣ. 2030ರಲ್ಲಿ ನಗರ ಪ್ರದೇಶಗಳು ಶೇ 70ರಷ್ಟು ಹೊಸ ಹುದ್ದೆಗಳನ್ನು ಸೃಷ್ಟಿಸಲಿದ್ದು, ದೇಶಾದ್ಯಂತ ತಲಾ ಆದಾಯದಲ್ಲಿ ನಾಲ್ಕು ಪಟ್ಟು ಹೆಚ್ಚಳ ಆಗಲಿದೆ ಎಂದೂ ವರದಿ ಹೇಳಿದೆ.
ನಗರಗಳಿಗಾಗಿ ವ್ಯಯಿಸಬೇಕಾದ ವೆಚ್ಚ ಕೂಡ ನಿರೀಕ್ಷೆ ಮೀರಿ ಹೆಚ್ಚುತ್ತಿದೆ. ತಲಾ ಆದಾಯ ಹೆಚ್ಚಬೇಕಾದ ಅವಶ್ಯಕತೆ ಎದ್ದು ಕಾಣುತ್ತಿದೆ. ಜಿಡಿಪಿ ದರದ ಶೇ.2ರಷ್ಟನ್ನು ನಗರ ಪ್ರದೇಶಗಳಲ್ಲಿ ವೆಚ್ಚ ಮಾಡಬೇಕಾಗಿದ್ದು ಈಗ ಶೇ 0.5ರಷ್ಟನ್ನು ಮಾತ್ರ ವೆಚ್ಚ ಮಾಡಲಾಗುತ್ತಿದೆ. ನಗರ ಪ್ರದೇಶಗಳ ವಾರ್ಷಿಕ ವೆಚ್ಚ 2015ರಲ್ಲಿ 30 ಬಿಲಿಯನ್ ಡಾಲರ್, 2020ರಲ್ಲಿ 60 ಬಿಲಿಯನ್ ಡಾಲರ್ ಮತ್ತು 2030ರಲ್ಲಿ 90 ಬಿಲಿಯನ್ ಡಾಲರ್ ತಲುಪಲಿದೆ ಎಂದೂ ಅದು ಹೇಳಿದೆ.
ಈ ಹೂಡಿಕೆಯ ಶೇ 80ರಷ್ಟು ಭಾಗ ಆಂತರಿಕವಾಗೇ ಲಭ್ಯವಾಗಲಿದೆ ಎಂದು ವರದಿ ಹೇಳಿದ್ದು, ತಮಿಳುನಾಡು, ಗುಜರಾತ್, ಕರ್ನಾಟಕ, ಮಹಾರಾಷ್ಟ್ರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಹೆಚ್ಚಿನ ಜನಸಂಖ್ಯೆ ನಗರ ಪ್ರದೇಶಗಳಲ್ಲಿ ವಾಸ ಮಾಡಲಿದೆ ಎಂದು ಹೇಳಿದೆ. ಹೆಚ್ಚಿನ ಸೇವೆಗೆ ಅನುಕೂಲವಾಗುವಂತೆ ಸಂವಿಧಾನದ 74ನೇ ತಿದ್ದುಪಡಿಯನ್ನು ಅನುಷ್ಠಾನಗೊಳಿಸಿ ನಗರಗಳಿಗೆ ಹೆಚ್ಚಿನ ಅಧಿಕಾರವನ್ನು ನೀಡುವಂತೆಯೂ ಅದು ಸೂಚಿಸಿದೆ. ಮಹಾನಗರಗಳಲ್ಲಿ 20-25 ಸ್ಯಾಟಲೈಟ್ ಟೌನ್ ಶಿಪ್ ಗಳನ್ನು ಸ್ಥಾಪಿಸುವ ಮೂಲಕ ಪ್ರವಾಸೀ ಹಾಗೂ ಇತರ ಉದ್ಯಮದ ಕೇಂದ್ರೀಕೃತ ನಗರಗಳ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದೂ ವರದಿ ಹೇಳಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications