ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ವರ್ಷಗಳಲ್ಲಿ ಅಜೀಂ ಪ್ರೇಮ್ ಜಿ ವಿವಿ

By Rajendra
|
Google Oneindia Kannada News

Azim Premji varsity will start by 2012
ಬೆಂಗಳೂರು, ಏ.24: ಇನ್ನೆರಡು ವರ್ಷಗಳಲ್ಲಿ ಮೊದಲ ಖಾಸಗಿ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬರಲಿದೆ. ''ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ'' ಸ್ಥಾಪನೆಗೆ ಸರ್ಕಾರ ಈಗಾಗಲೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು ಮುಂದಿನ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯಾಗಲಿದೆ.

ಕಂಪನಿಯ ನಾಲ್ಕನೆ ತ್ರೈಮಾಸಿಕ ಫಲಿತಾಂಶವನ್ನು ಪ್ರಕಟಿಸಿದ ಬಳಿಕ ವಿಪ್ರೊ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮಾತನಾಡುತ್ತಾ, ಅಜೀಂ ಪ್ರೇಜ್ ಜಿ ವಿಶ್ವವಿದ್ಯಾಲಯವು ಮುಂಬರುವ 24 ತಿಂಗಳಲ್ಲಿ ಕಾರ್ಯನಿರ್ವಹಿಸಲಿದೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಬೇಕಾದ ಭೂಮಿ ಮತ್ತು ಕಟ್ಟಡ ನಿರ್ಮಾಣದ ರೂಪರೇಷೆಗಳು ಅಂತಿಮವಾಗಿದೆ ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಶಿಕ್ಷಕರ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ದೇಶದಲ್ಲಿ ಅತ್ಯುತ್ತಮ ಶಿಕ್ಷಕರನ್ನು ತಯಾರಿಸುವುದು ನಮ್ಮ ಆದ್ಯತೆ. ಸರ್ಕಾರಿ ಅಧಿಕಾರಿಗಳು ಹಾಗೂ ಸಂಸ್ಥೆಗಳು ಗ್ರಾಮೀಣ, ಅರೆ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ವಿಶ್ವ್ವವಿದ್ಯಾಲಯದ ಚಟುವಟಿಕೆಗಳ ಬಗ್ಗೆ ವಿವರ ನೀಡಿದ್ದಾರೆ.

ಯಾವುದೇ ಲಾಭಾಪೇಕ್ಷೆ ಇಲ್ಲದ ಈ ವಿಶ್ವವಿದ್ಯಾಲಯವನ್ನು ಅಜೀಂ ಪ್ರೇಮ್ ಜಿ ಪ್ರತಿಷ್ಠಾನದಿಂದ ಸ್ಥಾಪಿಸಲಾಗುತ್ತಿದೆ. ವಿದ್ಯಾರ್ಥಿವೇತನಗಳು ಹಾಗೂ ಧಾರ್ಮಿಕದತ್ತಿ ಮೂಲಕ ಪ್ರತಿಷ್ಠಾನದ ನಿಧಿ ಬಳಕೆಯಾಗಲಿದೆ. ಯುಎಸ್ ನ ಐದು ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಶಿಕ್ಷಕರ ತರಬೇತಿ ಹಾಗೂ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X