ಮೇ 2ರಂದು ಲೋಹಿಯಾ ಜನ್ಮ ಶತಮಾನೋತ್ಸವ
ಗುಲ್ಬರ್ಗ,
ಏ.24: ಸಮಾಜವಾದಿ ಚಳವಳಿಯ ಹರಿಕಾರ ರಾಮ ಮನೋಹರ ಲೋಹಿಯಾ ಅವರ ಜನ್ಮ ಶತಾಬ್ದಿಯನ್ನು ಮೇ 2ರಂದು ಬೆಂಗಳೂರಿನಲ್ಲಿ ಆಚರಿಸಲಾಗುತ್ತದೆ ಎಂದು ವಿಧಾನ ಪರಿಷತ್ ನ ಮಾಜಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಬಿ ಆರ್ ಪಾಟೀಲ್ ತಿಳಿಸಿದ್ದಾರೆ. id="toptextpromo">ಗುಲ್ಬರ್ಗದಲ್ಲಿ
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರದ ಮಾಜಿ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಹಿಯಾ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಹೇಳಿದರು. id='are-slot-1' class='oiad oi-axt oiadv'> id='top-searched-articles'>ಮಾಜಿ
ಮುಖ್ಯಮಂತ್ರಿ ಎಸ್ ಬಂಗಾರಪ್ಪ, ವಿಧಾಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ಎಂ ಎಸ್ ಗುರುಪಾದಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಎಂ ಪಿ ಪ್ರಕಾಶ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಹಿಯಾ ವಿಚಾರಧಾರೆಗಳ ಬಗ್ಗೆ ಮಾತನಾಡಲಿದ್ದಾರೆ.











Click it and Unblock the Notifications