ದಂಡಾವತಿ: ಸಿಎಂಗೆ ಸಿದ್ದು ತಿರುಗೇಟು

ಬೆಂಗಳೂರಿನ ಮಹದೇವಪುರದಲ್ಲಿ ಬಿಬಿಎಂಪಿ ಚುನಾಯಿತ ಕಾಂಗ್ರೆಸ್ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಂಡಾವತಿ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಬಂಗಾರಪ್ಪ ಅವರನ್ನು ದೂರುವುದು ಸರಿಯಲ್ಲ ಎಂದು ಸಿದ್ದು ಹರಿಹಾಯ್ದಿದಿದ್ದಾರೆ.
ಕೃಷ್ಣಾ ಕೊಳ್ಳದ ನೀರಾವರಿ ಯೋಜನೆಗೆ ಸರಕಾರದ ಬೇಜವಾಬ್ದಾರಿತನದಿಂದ ಹಿನ್ನೆಡೆಯಾಗಿದೆ. ಅದನ್ನು ಮುಚ್ಚಿಕೊಳ್ಳಲು ಅನಗತ್ಯವಾಗಿ ಬೇರೆಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಕೃಷ್ಣಾ ನ್ಯಾಯಾಧೀಕರಕ್ಕೆ ತಪ್ಪು ಮಾಹಿತಿ ನೀಡಿದ್ದರಿಂದ ನೀರಾವರಿ ಯೋಜನೆಗೆ ಹಿನ್ನೆಡೆಯಾಗಿದ್ದು, ಜನರನ್ನು ತಪ್ಪು ದಾರಿಗೆಳೆಯಲಾಗುತ್ತಿದೆ ಎಂದು ಅವರು ಆರೋಪಿಸಿದರು.
ಈ ಯೋಜನೆಗೆ ಕಾಂಗ್ರೆಸ್ ಅಡ್ಡಿಪಡಿಸಿಲ್ಲ. ಪರಿಜ್ಞಾನವಿಲ್ಲದೆ ಸರಕಾರದಿಂದ ತಪ್ಪು ಮಾಹಿತಿ ನೀಡಿ ನ್ಯಾಯಾಧೀಕರಣದಿಂದ ಛೀಮಾರಿಗೊಳಗಾಗಿರುವ ಸರಕಾರದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಬಾಯಿಗೆ ಬಂದಂತೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.












Click it and Unblock the Notifications