ಮುಂದಿನ ವರ್ಷ ಮೊನೋ ರೈಲು ಯೋಜನೆ
ಬೆಂಗಳೂರು,
ಏ. 27 : ದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬೆಂಗಳೂರು ಮೊನೋ ರೈಲು ಯೋಜನೆಗೆ ರಾಜ್ಯ ಸರಕಾರ ಚಾಲನೆ ನೀಡಿದೆ. ವಾಹನ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಮೆಟ್ರೋ ರೈಲು ವಿಸ್ತರಣೆಯ ಜತೆಗೆ ಮೊನೋ ರೈಲು ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೈಸ್ಪೀಡ್ ರೈಲು ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟದಲ್ಲಿ ಈ ಮೂರು ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಗುವುದು ಎಂದರು. ಜೂನ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು. id='are-slot-1' class='oiad oi-axt oiadv'> id='top-searched-articles'>ಮೊನೋ
ರೈಲು ಯೋಜನೆಗೆ ಸರಕಾರ ಬದ್ಧವಾಗಿದೆ. ಮೊದಲ ಹಂತದ ಯೋಜನೆ 34 ಕಿಮೀಗಳಿರುತ್ತದೆ. ನಗರದ ಹೊರವಲಯದಲ್ಲಿಯೇ ಈ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಯಡಿಯೂರಪ್ಪ ವಿವರಿಸಿದರು.











Click it and Unblock the Notifications