ಬಿಜೆಪಿ ಸರಕಾರಕ್ಕೆ ಕಾಂಗ್ರೆಸ್ ಬೆಂಬಲ : ಕುಮಾರಸ್ವಾಮಿ
ಬೆಂಗಳೂರು,
ಏ. 29 : ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರಿಂದಾಗಿಯೇ ರಾಜ್ಯದಲ್ಲಿ ಇನ್ನೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿರಲು ಸಾಧ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. id="toptextpromo">ನಗರದಲ್ಲಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಕೆಲ ನಾಯಕರು ರಾತ್ರೋರಾತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತಾರೆ. ಇಂತಹ ನಾಯಕರ ಪರೋಕ್ಷ ಬೆಂಬಲದಿಂದಲೇ ಬಿಜೆಪಿ ಸರ್ಕಾರ ರಾಜ್ಯದಲ್ಲಿದೆ ಉಳಿದಿದೆ ಎಂದರು. ಕೆಲ ತಿಂಗಳ ಹಿಂದೆ ಜೆಡಿಎಸ್ ಶಾಸಕರಿಗೆ ಸಿಹಿ ಸುದ್ದಿ ನೀಡುವ ಭರವಸೆ ನೀಡಿದ್ದು ನಿಜ. ಈ ಸಿಹಿ ಸುದ್ದಿಯನ್ನೇ ಕಹಿ ಮಾಡಿದ ಕ್ರೆಡಿಟ್ ಕಾಂಗ್ರೆಸ್ ನಾಯಕರಿಗೆ ಸಲ್ಲಬೇಕು ಎಂದು ವ್ಯಂಗ್ಯವಾಡಿದರು. id='are-slot-1' class='oiad oi-axt oiadv'> id='top-searched-articles'>ಕಾಂಗ್ರೆಸ್
ಪಕ್ಷ ಪ್ರತಿಪಕ್ಷ ಸ್ಥಾನವನ್ನು ಯಾವ ಮಟ್ಟದಲ್ಲಿ ನಿಭಾಯಿಸುತ್ತಿದೆ ಎಂದು ಆ ಪಕ್ಷದ ನಾಯಕರು ಆತ್ಮಾಲೋಕನ ಮಾಡಿಕೊಳ್ಳಬೇಕು. ಬಿಜೆಪಿ ಸರ್ಕಾರದ ವೈಫಲ್ಯ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುವುದನ್ನು ಜೆಡಿಎಸ್ ಕೈಬಿಡುವುದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.











Click it and Unblock the Notifications