ಗ್ರಾಪಂ ಚುನಾವಣೆ : ಬಲಗೈ ಮಧ್ಯದ ಬೆರಳಿಗೆ ಶಾಯಿ
ಬೆಂಗಳೂರು,
ಮೇ. 1 : ಮೇ 8 ಮತ್ತು 12ರಂದು ಎರಡು ಹಂತದಲ್ಲಿ ನಡೆಯಲಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮತದಾನದ ನಂತರ ಬಲಗೈ ಮಧ್ಯದ ಬೆರಳಿಗೆ ಅಳಿಸಲಾಗದ ಮಸಿಯನ್ನು ಹಚ್ಚಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. id="toptextpromo">ವಾಡಿಕೆಯಂತೆ
ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಚ್ಚಲಾಗುತ್ತದೆ. ಆದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಲಗೈ ತೋರುಬೆರಳಿಗೆ ಶಾಯಿಯನ್ನು ಹಚ್ಚಲಾಗಿತ್ತು. ಆದ್ದರಿಂದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಲಗೈ ಮಧ್ಯದ ಬೆರಳಿಗೆ ಇಂಕ್ ಹಚ್ಚಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. id='are-slot-1' class='oiad oi-axt oiadv'> id='top-searched-articles'>ಒಟ್ಟು
5574 ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 8ರಂದು 16 ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನ ನಡೆದರೆ ಮೇ 12ರಂದು 15 ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ಮೇ 17ರಂದು ಫಲಿತಾಂಶ ಹೊರಬೀಳಲಿದೆ.











Click it and Unblock the Notifications