ಹಾಲಪ್ಪ ವಿರುದ್ಧ ಕ್ರಿಮನಲ್ ಕೇಸ್ ಹಾಕಿ : ಸಿದ್ದು
ಬೆಂಗಳೂರು,
ಮೇ. 2 : ಸ್ನೇಹಿತ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಚಿವ ಹರತಾಳು ಹಾಲಪ್ಪ ರಾಜೀನಾಮೆ ನೀಡಿದರೆ ಸಾಲದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. id="toptextpromo">ಪ್ರಕರಣ
ಬೆಳಕಿಗೆ ಬರುತ್ತಿದ್ದಂತೆಯೇ ಸಚಿವ ಹಾಲಪ್ಪ ರಾಜೀನಾಮೆ ನೀಡಿದ್ದು ಏಕೆ ? ಎಂದು ವಾಗ್ದಾಳಿ ಆರಂಭಿಸಿದ ಸಿದ್ಧು, ಪ್ರಕರಣ ಅತ್ಯಂತ ಗಂಭೀರವಾಗಿದೆ. ಹೀಗಾಗಿ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು. ಜವಾಬ್ದಾರಿಯತ ಸ್ಥಾನದಲ್ಲಿರುವ ಸಚಿವ ಸ್ನೇಹಿತನ ಪತ್ನಿಯನ್ನೇ ಅತ್ಯಾಚಾರ ಎಸಗಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಕರ್ನಾಟಕದ ರಾಜಕೀಯ ಇತಿಹಾಸದಲ್ಲೇ ಇದೊಂದು ಕಪ್ಪು ಚುಕ್ಕೆ. ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕರಣಗದ ಬಗ್ಗೆ ಹೇಳಿಕೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಈ
ಮಧ್ಯ ಯುವಕಾಂಗ್ರೆಸ್ ಕಾರ್ಯಕರ್ತರು ಪ್ರಕರಣ ವಿರೋಧಿಸಿ ಯಡಿಯೂರಪ್ಪ ಅವರ ಮನಗೆ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಆರ್ ವಿ ದೇಶಪಾಂಡೆ ಸುದ್ದಿಗೋಷ್ಠಿ ನಡೆಸಿ, ಸಚಿವ ಹಾಲಪ್ಪ ಮತ್ತು ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ದೂರಿದ್ದಾರೆ.











Click it and Unblock the Notifications