ಹಾಲಪ್ಪ ವಿರುದ್ಧ ದೂರು ಸಲ್ಲಿಸಿದ ಚಂದ್ರಾವತಿ
ಬೆಂಗಳೂರು,
ಮೇ. 3 : ಮಾಜಿ ಸಚಿವ ಹರತಾಳ್ ಹಾಲಪ್ಪ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆನ್ನಲಾದ ಶಿವಮೂಗ್ಗದ ಚಂದ್ರಾವತಿ ಹಾಗೂ ಅವರ ಪತಿ ವೆಂಕಟೇಶ್ ಮೂರ್ತಿ ಅವರು ಭಾನುವಾರ ರಾತ್ರಿ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದಾರೆ. id="toptextpromo">ತಮ್ಮ
ವಕೀಲರೊಂದಿಗೆ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿದ ಚಂದ್ರಾವತಿ ಅತ್ಯಾಚಾರದ ದೂರು ಸಲ್ಲಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಮಾಹಿತಿಗಳನ್ನು 12 ಪುಟಗಳ ದೂರಿನಲ್ಲಿ ವಿವರಿಸಲಾಗಿದೆ. ಜೊತೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ತೆರಳಿ ಈ ದಂಪತಿ ದೂರು ಸಲ್ಲಿಸಿದ್ದಾರೆ. ಇಂದು ಶಿವಮೂಗ್ಗದ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸುವ ಸಾಧ್ಯತೆಗಳಿವೆ. id='are-slot-1' class='oiad oi-axt oiadv'> id='top-searched-articles'>ಅತ್ಯಾಚಾರ
ನಡೆಸಿದ್ದರೆನ್ನಲಾದ ಘಟನೆ ಬಳಿಕ ಮನೆಯಲ್ಲಿ ನಡೆದ ವಿದ್ಯಮಾನಗಳನ್ನು ಚಂದ್ರಾವತಿ ಅವರ ಪತಿ ವೆಂಕಟೇಶಮೂರ್ತಿ ಅವರು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದ ದೃಶ್ಯವನ್ನು ಒಳಗೊಂಡ ಸಿಡಿಯನ್ನು ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಸಲಾಗಿದೆ. ದೂರು ಸ್ವೀಕರಿಸಿದ ಪೊಲೀಸ್ ಮಹಾನಿರ್ದೇಶಕರು ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.











Click it and Unblock the Notifications