ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಐಡಿ ಪೊಲೀಸರ ಕೈಗೆ ಹಾಲಪ್ಪನ ಕಾಮಕಾಂಡ

By Mrutyunjaya Kalmat
|
Google Oneindia Kannada News

Yeddyurappa
ಬೆಂಗಳೂರು, ಮೇ. 3 : ಹಾಲಪ್ಪ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದಾರೆ. ಆದರೆ, ಹಾಲಪ್ಪ ಅವರನ್ನು ಏಕೆ ಬಂಧಿಸಬೇಕು ? ರಾಸಲೀಲೆಯಲ್ಲಿ ಸಿಕ್ಕಿಬಿದ್ದಿದ್ದ ಆಂಧ್ರಪ್ರದೇಶ ರಾಜ್ಯಪಾಲರನ್ನೇಕೆ ಜೈಲಿಗೆ ಹಾಕಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದ್ದಾರೆ.

ರಾಜ್ಯಾದ್ಯಂತ ವ್ಯಾಪಕ ಖಂಡನೆಗೆ ಆಕ್ರೋಶಕ್ಕೆ ಗುರಿಯಾಗಿರುವ ಹರತಾಳ್ ಹಾಲಪ್ಪ ಅತ್ಯಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರಲು ಈ ಕೂಡಲೇ ಸಿಐಡಿ ತನಿಖೆ ನಡೆಸಲು ಸೂಚನೆ ನೀಡಲಾಗಿದೆ ಎಂದರು. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಆರೋಪ ಬಂದ ಹಿನ್ನೆಲೆಯಲ್ಲಿ ಸಚಿವರೊಬ್ಬರು ದಿಢೀರ್ ಅಂತ ರಾಜೀನಾಮೆ ನೀಡಿರುವುದು ಇದೇ ಪ್ರಥಮ. ಹಾಲಪ್ಪ ಈ ಪ್ರಕರಣದಲ್ಲಿ ನಿರಪರಾಧಿಯಾಗಿ ಹೊರಬರಲಿದ್ದಾರೆ ಎಂದು ಅವರು ಸಮರ್ಥಿಸಿಕೊಂಡರು.

ಹಾಲಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿರುವ ಕಾಂಗ್ರೆಸ್ ಗೆ ತಿರುಗೇಟು ನೀಡಿದ ಈಶ್ವರಪ್ಪ, ಹಾಲಪ್ಪ ಅವರನ್ನು ಏಕೆ ಬಂಧಿಸಬೇಕು. ಆಂಧ್ರಪ್ರದೇಶದ ರಾಜ್ಯಪಾಲ ಎನ್ ಡಿ ತಿವಾರಿ ಅವರನ್ನು ಈ ಕಾಂಗ್ರೆಸ್ ಪಕ್ಷ ಬಂಧಿಸಿತ್ತೆ. ಆರೋಪ ಬಂದಿದೆ. ತನಿಖೆ ನಡೆಯಲಿ ನಂತರ ಮುಂದಿನ ಕ್ರಮಗಳ ಬಗ್ಗೆ ಯೋಚಿಸೋಣ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X