ಮೇ.7ರಂದು ದ್ವಿತೀಯ ಪಿಯುಸಿ ಫಲಿತಾಂಶ

Karnataka PUC results to be declared on May 5
ಬೆಂಗಳೂರು, ಮೇ.4: ವಿದ್ಯಾರ್ಥಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ 2010ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳು ಮೇ.7ರ ಶುಕ್ರವಾರದಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಮಂಡಳಿ ತಿಳಿಸಿದೆ.

ಮೇ.7ರ ಸಂಜೆ ವೇಳೆಗೆ ಇಂಟರ್ ನೆಟ್ ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶಗಳು ಲಭ್ಯವಾಗಲಿದೆ. ಹಾಗೆಯೇ ಮೇ.8ರ ಶನಿವಾರ ಪದವಿಪೂರ್ವ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಈ ಬಾರಿ ರಾಜ್ಯದಾದ್ಯಂತ ಒಟ್ಟು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ವಿದ್ಯಾರ್ಥಿಗಳ ಜೀವನದಲ್ಲಿ ದ್ವಿತೀಯ ಪಿಯುಸಿ ಮಹತ್ತರವಾದ ಘಟ್ಟ, ಮುಂದಿನ ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿ ಕೂಡ. ಶಾಲೆ ಮತ್ತು ಕಾಲೇಜು ಶಿಕ್ಷಣದ ನಡುವಿನ ಸೇತುವೆ. ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ನಿರೀಕ್ಷಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ. ಫಲಿತಾಂಶಕ್ಕಾಗಿ ದಟ್ಸ್ ಕನ್ನಡ ಜಾಲತಾಣದಲ್ಲಿ ನಿರೀಕ್ಷಿಸಿ.

ಕರ್ನಾಟಕ ಪಿಯುಸಿ ಫಲಿತಾಂಶ 2010 - ನಿರೀಕ್ಷಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+