ಲಾಲ್ ಬಾಗ್ ಅಭಿವೃದ್ಧಿಗೆ 30 ಕೋ : ಸಿಎಂ
ಬೆಂಗಳೂರು,
ಮೇ. 5 : ಲಾಲ್ ಬಾಗ್ ಉದ್ಯಾನವನದ ಸಮಗ್ರ ಅಭಿವೃದ್ಧಿಗೆ 30 ಕೋಟಿ ರುಪಾಯಿಗಳನ್ನು ವಿನಿಯೋಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. id="toptextpromo">ಲಾಲ್
ಬಾಗ್ ಗೆ ಬೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉದ್ಯಾನವನದ ನಾಲ್ಕು ಕಡೆಗೆ ನೀರಿನ ಕಾರಂಜಿ,ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ದೋಣಿ ಸಂಚಾರ, ಶ್ವಾನಗಳ ನಿರ್ಮೂಲನೆ, ನಡಿಗೆ ಪಥ, ಆಟದ ಮೈದಾನ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು. id='are-slot-1' class='oiad oi-axt oiadv'> id='top-searched-articles'>ಬಿಡಿಎ
ವತಿಯಿಂದ ಲಾಲ್ ಬಾಗ್ ಅಭಿವೃದ್ಧಿಗೆ ಈಗಾಗಲೇ 1.6 ಕೋಟಿ ರುಪಾಯಿಗಳನ್ನು ವಿನಿಯೋಗಿಸಲಾಗಿದ್ದು, ಇನ್ನೂ 25 ರಿಂದ 30 ಕೋಟಿ ರುಪಾಯಿಗಳನ್ನು ವ್ಯಯಿಸಲಾಗುವುದು. ಇನ್ನೊಂದು ವರ್ಷದಲ್ಲಿ ಲಾಲ್ ಬಾಗ್ ಸಂಪೂರ್ಣ ಚಿತ್ರಣವನ್ನು ಬದಲಿಸಲಾಗುವುದು ಎಂದು ಹೇಳಿದರು. ನಗರದ ನಾಲ್ಕು ಭಾಗಗಳಲ್ಲಿ ಲಾಲ್ ಬಾಗ್ ನಂತಹ ಉದ್ಯಾನವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಭಿಕ್ಷುಕರ ಕಾಲೋನಿ ಬಳಿ ಒಂದು ಉದ್ಯಾನ ನಿರ್ಮಿಸಲಾಗುವುದು. ಇದೇ ರೀತಿ ಕಬ್ಬನ್ ಪಾರ್ಕ್ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ವಿವರಿಸಿದರು.











Click it and Unblock the Notifications