ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಯುಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ

By Rajendra
|
Google Oneindia Kannada News

hlepline for second puc students
ಬೆಂಗಳೂರು, ಮೇ.5: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ( 2010) ಮೇ.6 ಗುರುವಾರ ಸಾಯಂಕಾಲ 6 ಗಂಟೆ ನಂತರ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಹಾಯವಾಣಿಯನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ, ಮಾನಸಿಕ, ಭಾವನಾತ್ಮಕ ಸಮಸ್ಯೆಗಳು ಏನೇ ಇದ್ದರೂ ಅದನ್ನು ಪರಿಹರಿಸುವುದೇ ಸಹಾಯವಾಣಿಯ ಉದ್ದೇಶವಾಗಿರುತ್ತದೆ.

ಫಲಿತಾಂಶದ ವೇಳೆ ವಿದ್ಯಾರ್ಥಿಗಳು ಆತಂಕಗೊಳ್ಳಬಾರದು ಎಂಬ ಸದುದ್ದೇಶದಿಂದ ಈ ಸಹಾಯವಾಣಿಯನ್ನು ಆರಂಭಿಸಲಾಗುತ್ತಿದೆ. ಬುಧವಾರದಿಂದ (ಮೇ.5) ಶುಕ್ರವಾರದವರೆಗೆ (ಮೇ.7) ಮಧ್ಯಾಹ್ನ 3 ಗಂಟೆಯಿಂದ ಸಂಜೆ 5ರವರೆಗೆ ವಿದ್ಯಾರ್ಥಿಗಳು ಸಹಾಯವಾಣಿಗೆ ಮೊರೆ ಹೋಗಬಹುದು.

ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಅನುಭವಿಸುವ ಗೊಂದಲ, ಖಿನ್ನತೆ,ಆತಂಕಗಳನ್ನು ಕೌನ್ಸಿಲಿಂಗ್ ಮೂಲಕ ನಿಮ್ಹಾನ್ಸ್ ಆಸ್ಪತ್ರೆಯ (ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ)ನುರಿತ ಮಾನಸಿಕ ತಜ್ಞರು ಪರಿಹರಿಸಲಿದ್ದಾರೆ. ವಿದ್ಯಾರ್ಥಿಗಳು ಸಲಹೆ, ಸೂಚನೆ, ಮಾರ್ಗದರ್ಶನವನ್ನು ತಜ್ಞ ವೈದ್ಯರಿಂದ ಪಡೆಯಬಹುದು. ಕರೆ ಮಾಡಬೇಕಾದ ದೂರವಾಣಿ ಸಂಖ್ಯೆಗಳು: 080-2336 6778 ಹಾಗೂ 080-2336 6779.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X