ಶೂನ್ಯ ಫಲಿತಾಂಶ : ಶಾಲಾ ಕಾಲೇಜು ರದ್ದು?

ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡು ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳು ಸೇರಿ 86 ಶಾಲೆಗಳಲ್ಲಿ 2010 ರ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಇದರ ಜೊತೆಗೆ ಇಂದು ಪ್ರಕಟಗೊಂಡಿರುವ ಪಿಯುಸಿ ಪರೀಕ್ಷೆಯಲ್ಲೂ ಸುಮಾರು 42 ಕಾಲೇಜುಗಳು ಶೂನ್ಯ ಫಲಿತಾಂಶ ಸಂಪಾದಿಸಿವೆ. ಈ ಬಗ್ಗೆ ಕೂಲಂಕಷ ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಶೂನ್ಯ ಫಲಿತಾಂಶ ಬಂದಿರುವ ಶಾಲೆಗಳ ಮೇಲೆ ಏಕಾಏಕಿ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ. ಹೀಗಾಗಿ ಕಳೆದ ಮೂರು ವರ್ಷಗಳಲ್ಲಿ ಆಯಾ ಶಾಲಾ ಕಾಲೇಜುಗಳ ಫಲಿತಾಂಶ, ವಿದ್ಯಾರ್ಥಿಗಳ ಸಂಖ್ಯೆ, ಬೋಧಕ ವರ್ಗ, ಮೂಲಭೂತ ಸೌಲಭ್ಯಗಳು ಸೇರಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಲಾಗುವುದು. ಶೂನ್ಯ ಫಲಿತಾಂಶ ಗಳಿಸಿರುವ ಶಾಲೆ ಕಾಲೇಜುಗಳಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಒಂದು ವಾರದಲ್ಲಿ ಉತ್ತರಿಸಬೇಕೆಂದು ನೋಟಿಸ್ ನಲ್ಲಿ ತಿಳಿಸಲಾಗಿದೆ ಎಂದು ಕಾಗೇರಿ ವಿವರಿಸಿದರು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಲದ ಎಸ್ಎಸ್ಎಲ್ ಸಿ ಫಲಿತಾಂಶ ಕಡಿಮೆಯಾಗಿದೆ. ವಸ್ತುನಿಷ್ಠ ಮಾದರಿ ಪ್ರಶ್ನೆ ಪತ್ರಿಕೆ ರದ್ದು ಮಾಡಿ ಉತ್ತರ ಬರೆಯಲು ಹೆಚ್ಚು ಅವಕಾಶ ನೀಡಲಾಗಿದೆ. ಇದರಿಂದ ಗುಣಮಟ್ಟದ ಶಿಕ್ಷಣವನ್ನು ನಿರೀಕ್ಷಿಸಬಹುದು. ಪಿಯುಸಿ ಪರೀಕ್ಷೆಯಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಉತ್ತಮ ಫಲಿತಾಂಶ ಬಂದಿದೆ ಎಂದು ಕಾಗೇರಿ ಅಭಿಪ್ರಾಯಪಟ್ಟರು.












Click it and Unblock the Notifications