ಹಾಲಪ್ಪನನ್ನು ಅಂಡಮಾನ್ ಜೈಲಿಗೆ ಹಾಕಿ
ಶಿರಸಿ,
ಮೇ. 7 : ನಾನೇನಾದರೂ ಮುಖ್ಯಮಂತ್ರಿಯಾಗಿದ್ದರೆ ಅತ್ಯಾಚಾರ ಆರೋಪಕ್ಕೆ ಒಳಗಾಗಿರುವ ಮಾಜಿ ಸಚಿವ ಹರತಾಳು ಹಾಲಪ್ಪನನ್ನು ಅಂಡಮಾನ್ ಜೈಲಿಗೆ ಕಳುಹಿಸುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತ್ಯಾಚಾರ ನಡೆಸಿದ ಪ್ರಕರಣ ದಾಖಲಾಗಿ ನಾಲ್ಕು ದಿನ ಕಳೆದರೂ ಆರೋಪಿಯನ್ನು ಬಂಧಿಸದಿರುವ ಸರಕಾರದ ಕ್ರಮ ಖಂಡನೀಯ ಎಂದರು. ನೈತಿಕ ಮೌಲ್ಯಗಳ ಬಗ್ಗೆ ಮಾತನಾಡುವ ಆರ್ಎಸ್ಎಸ್, ವಿಎಚ್ ಪಿ ಮತ್ತಿತರ ಸಂಘಟನೆಗಳು ಎಲ್ಲಿವೆ. ಹಾಲಪ್ಪ ವಿಷಯದಲ್ಲಿ ಬಾಯಿ ಮುಚ್ಚಿಕೊಂಡಿರುವುದೇಕೆ ಎಂದು ಅವರು ಪ್ರಶ್ನಿಸಿದರು. id='are-slot-1' class='oiad oi-axt oiadv'> id='top-searched-articles'>ಸರಕಾರದ
ಮೊಂಡುತನ ಎಲ್ಲರಿಗೂ ತಿಳಿದಿದೆ. ಮಾಜಿ ಸಚಿವ ಹಾಲಪ್ಪ ಸಾತ್ವಿಕ ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕೆ ಎಸ್ ಈಶ್ವರಪ್ಪ ಕೊಂಡಾಡುವ ಮೂಲಕ ಅವರ ಬೆಂಬಲಕ್ಕೆ ನಿಂತಿದ್ದು ಎಷ್ಟು ಸರಿ ಎಂದು ದೇಶಪಾಂಡೆ ಕಿಡಿಕಾರಿದರು.











Click it and Unblock the Notifications