ಮೆಗ್ಗಾನ್ನಿಂದ ವಿಕ್ಟೋರಿಯಾಗೆ ಹಾಲಪ್ಪ ಶಿಫ್ಟ್?
ಶಿವಮೊಗ್ಗ,
ಮೇ. 11 : ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ಅವರ ದೇಹಸ್ಥಿತಿಯಲ್ಲಿ ತೀವ್ರ ಏರುಪೇರು ಕಂಡುಬರುತ್ತಿರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ. id="toptextpromo">ಸ್ನೇಹಿತ
ಪತ್ನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಾಲಪ್ಪ ಅವರನ್ನು ಕಳೆದ ಭಾನುವಾರ ಸಿಐಡಿ ಪೊಲೀಸರ ಮುಂದೆ ಶರಣಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸಿಐಡಿ ಪೊಲೀಸರು, ಹಾಲಪ್ಪ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಹಾಲಪ್ಪ ಅವರನ್ನು ಮೇ 24ರ ವರೆಗೆ ನ್ಯಾಯಾಂಗ ಬಂಧನದಲ್ಲಿರಿಸುವಂತೆ ಆದೇಶ ಹೊರಡಿಸಿತ್ತು. id='are-slot-1' class='oiad oi-axt oiadv'> id='top-searched-articles'>ಈ
ಮಧ್ಯೆ ಆರೋಪಿ ಹಾಲಪ್ಪ ಅವರು ತೀವ್ರ ರಕ್ತದೊತ್ತಡದಿಂದ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಇಲ್ಲಿನ ಮೆಗ್ಗಾನ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಲಪ್ಪ ಅವರು ರಕ್ತದೊತ್ತಡ, ಮಧುಮೇಹ, ಎದೆನೋವು, ತಲೆಸುತ್ತು ಸೇರಿದಂತೆ ಐದಾರು ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆಯ ಆಧೀಕ್ಷಕ ಮಹೇಂದ್ರಪ್ಪ ತಿಳಿಸಿದ್ದಾರೆ.











Click it and Unblock the Notifications