ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಕೋರ್ಟ್ ತಪ್ಪೆಸಗಿದೆ ಜಯಾ ವಾದ

By Mahesh
|
Google Oneindia Kannada News

SC dismisses Jayalalitha's plea in asset case
ನವದೆಹಲಿ, ಮೇ.12: ತನ್ನ ವಿರುದ್ಧದ 66.65 ಕೋ. ರೂ. ಅಕ್ರಮ ಸಂಪತ್ತು ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ವಜಾಗೊಳಿಸಿದೆ.

1997ರ, ಜೂ.5ರಂದು ದೂರಿನ ಬಗ್ಗೆ ಕ್ರಮ ಕೈಗೊಂಡು ವಿಚಾರಣಾಧೀನ ನ್ಯಾಯಾಲಯವು ನೀಡಿದ್ದ ಆದೇಶವನ್ನು ಎತ್ತಿಹಿಡಿಯುವಾಗ ಕರ್ನಾಟಕ ಉಚ್ಚ ನ್ಯಾಯಾಲಯವು ತಪ್ಪೆಸಗಿದೆ ಎಂಬ ಜಯಲಲಿತಾರ ವಾದವನ್ನು ನ್ಯಾಯಮೂರ್ತಿಗಳಾದ ಬಿ. ಸುದರ್ಶನ ರೆಡ್ಡಿ ಮತ್ತು ಎಸ್.ಎಸ್. ನಿಜಾರ್ ಪೀಠವು ತಿರಸ್ಕರಿಸಿತು.

14 ವರ್ಷಗಳಷ್ಟು ಹಳೆಯದಾದ ಈ ಪ್ರಕರಣದಲ್ಲಿ ತಡೆಯಾಜ್ಞೆ ನೀಡಲು ಮಾ.19ರಂದು ನಿರಾಕರಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಜಯಲಲಿತಾರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದ ನಂತರ 42 ಸಾಕ್ಷಿಗಳ ಪಾಟೀ ಸವಾಲಿಗೆ ಕಾಲಮಿತಿಯನ್ನು ನಿಗದಿಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಆದೇಶ ನೀಡಿತ್ತು. ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಚ್ 10ರ ಆದೇಶವನ್ನು ಪ್ರಶ್ನಿಸಿ ಜಯಲಲಿತಾ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X