ಸಿಸಿಟಿವಿ ಅಡಿಯಲ್ಲಿ ಪರೀಕ್ಷಾ ಮೌಲ್ಯಮಾಪನ
ಬೆಂಗಳೂರು,ಮೇ.13:
ಪರೀಕ್ಷಾ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಡಿಯಿಟ್ಟ ಬೆಂಗಳೂರು ವಿಶ್ವವಿದ್ಯಾಲಯ ಇದೀಗ ಪರೀಕ್ಷಾ ಚಟುವಟಿಕೆಗಳನ್ನು ಸುಧಾರಿಸಲು ಮುಂದಾಗಿದೆ. ಮುಂಬರುವ ಪರೀಕ್ಷಾ ಮೌಲ್ಯಮಾಪನ ಸಿಸಿಟಿವಿ ಕ್ಯಾಮೆರಾಗಳ ಹದ್ದಿನ ಕಣ್ಣಿನಡಿ ನಡೆಯಲಿದೆ. id="toptextpromo">ಮೌಲ್ಯಮಾಪನ
ಕೇಂದ್ರಗಳಲ್ಲಿ ಬೆಂಗಳೂರು ವಿವಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಿದೆ. ಇಂಡಿಯನ್ ಸೆಂಟರ್ ಫಾರ್ ಟ್ರಾನ್ಸಫಾರ್ಮಮೇಶನ್ ಸಹಯೋಗದಲ್ಲಿ ಆರಂಭಿಸಲಾಗಿರುವ ಸುಧಾರಣಾ ಕ್ರಮದಂತೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಂಗಳೂರು ವಿವಿ ಉಪಕುಲಪತಿ ಡಾ.ಎನ್ ಪ್ರಭುದೇವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಪರೀಕ್ಷಾ
ನಕಲು ತಡೆಗಟ್ಟಲು ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಮತ್ತು ಒಎಂಆರ್ ಶೀಟ್ ನ ಸ್ಕ್ಯಾನಿಂಗ್ ನಡೆಸಲಾಗುತ್ತದೆ. ಪರೀಕ್ಷಾ ಚಟುವಟಿಕೆಗಳಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಈ ಕ್ರಮಕ್ಕೆ ಮುಂದಾಗಿದೆ ವಿವಿ ಅಧಿಕಾರಿಗಳು ತಿಳಿಸಿದ್ದಾರೆ.











Click it and Unblock the Notifications