ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸಿಸಿಟಿವಿ ಅಡಿಯಲ್ಲಿ ಪರೀಕ್ಷಾ ಮೌಲ್ಯಮಾಪನ
ಮೌಲ್ಯಮಾಪನ ಕೇಂದ್ರಗಳಲ್ಲಿ ಬೆಂಗಳೂರು ವಿವಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಿದೆ. ಇಂಡಿಯನ್ ಸೆಂಟರ್ ಫಾರ್ ಟ್ರಾನ್ಸಫಾರ್ಮಮೇಶನ್ ಸಹಯೋಗದಲ್ಲಿ ಆರಂಭಿಸಲಾಗಿರುವ ಸುಧಾರಣಾ ಕ್ರಮದಂತೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಂಗಳೂರು ವಿವಿ ಉಪಕುಲಪತಿ ಡಾ.ಎನ್ ಪ್ರಭುದೇವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ನಕಲು ತಡೆಗಟ್ಟಲು ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಮತ್ತು ಒಎಂಆರ್ ಶೀಟ್ ನ ಸ್ಕ್ಯಾನಿಂಗ್ ನಡೆಸಲಾಗುತ್ತದೆ. ಪರೀಕ್ಷಾ ಚಟುವಟಿಕೆಗಳಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯ ಈ ಕ್ರಮಕ್ಕೆ ಮುಂದಾಗಿದೆ ವಿವಿ ಅಧಿಕಾರಿಗಳು ತಿಳಿಸಿದ್ದಾರೆ.
Comments
ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ನಕಲು ಪರೀಕ್ಷೆ ಸಿಸಿಟಿವಿ bangalore university evaluation malpractice exams bangalore
Story first published: Thursday, May 13, 2010, 10:33 [IST]