ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುತಾಲಿಕ್ ಪ್ರಕರಣ ಸಿಬಿಐಗೆ ವಹಿಸಿ : ಅಗ್ನಿ ಶ್ರೀಧರ್

By Mahesh
|
Google Oneindia Kannada News

Agni Shridhar
ಬೆಂಗಳೂರು, ಮೇ.16: ಕೋಮುಗಲಭೆ ಸೃಷ್ಟಿಸಲು ಹಣ ಕೇಳಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಸರಕಾರವನ್ನು ಒತ್ತಾಯಿಸಿದೆ. ಇನ್ನೊಂದೆಡೆ ಸೇನೆಯನ್ನು ರದ್ದುಗೊಳಿಸಿ, ಮುತಾಲಿಕ್ ಬಂಧಿಸುವಂತೆ ಪೀಪಲ್ ಫ್ರಂಟ್ ಆಫ್ ಇಂಡಿಯಾ(PFI) ಸರ್ಕಾರವನ್ನು ಆಗ್ರಹಿಸಿದೆ.

ಶ್ರೀರಾಮಸೇನೆಯ ಈ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಇದರ ತೀವ್ರ ತೆಯೇ ಇಲ್ಲದಿರುವುದು ಅತ್ಯಂತ ಬೇಸರದ ಸಂಗತಿ. ಈ ಕೆಲಸವನ್ನು ಮುಸ್ಲಿಮರಸಂಘಟನೆಯೊಂದು ಮಾಡಿದ್ದರೆ, ಅದರ ತೀವ್ರತೆ ಹೇಗಿರುತ್ತಿತ್ತು? ಎಂದು ಕರುನಾಡ ಸೇನೆ ಕಾರ್ಯಾಧ್ಯಕ್ಷ ಅಗ್ನಿ ಶ್ರೀಧರ್ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಪ್ರಶ್ನಿಸಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸದ ಸಂಘ ಪರಿವಾರಗಳು ಮುತಾಲಿಕ್‌ಗೂ, ನಮಗೂ ಸಂಬಂಧವಿಲ್ಲ ಎನ್ನುತ್ತಿವೆ ಎಂದು ಆರೋಪಿಸಿದರು.

ಪ್ರಮೋದ್ ಮುತಾಲಿಕ್ ಹಾಗೂ ಈ ಪ್ರಕರಣದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಬೇಕು. ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಮತ್ತು ಶ್ರೀರಾಮಸೇನೆ ಯನ್ನು ನಿಷೇಧಿಸಬೇಕು. ಇಲ್ಲದಿದ್ದರೆ ಮೇ18ರ ನಂತರ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಸಂಚಾಲಕ ತಲಕಾಡು ಚಿಕ್ಕರಂಗೇಗೌಡ ಮಾತನಾಡಿ, ಮಾತೆತ್ತಿದರೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು ಎನ್ನುವ ಮುತಾಲಿಕ್ ಅವರನ್ನು ಈಗ ಏನು ಮಾಡಬೇಕು ಎಂದು ಪ್ರಶ್ನಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X