ರಾತ್ರಿ 2 ಗಂಟೆವರೆಗೂ ಚಿಯರ್ಸ್ ಎಂದ ಸರಕಾರ

Yeddyurappa
ಬೆಂಗಳೂರು, ಮೇ. 16 : ಪಂಚತಾರಾ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟದ ಮೇಲಿನ ನಿರ್ಬಂಧ ಸಡಿಲಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ತಾರಾ ಹೋಟೆಲ್‌ಗಳಲ್ಲಿ ರಾತ್ರಿ 2 ರವರೆಗೆ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಮಧ್ಯರಾತ್ರಿ ತನಕ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಪ್ರವಾಸಿಗರು ಮತ್ತು ವಿದೇಶಿಯರಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಆಲೋಚನೆ ಮಾಡಲಾಗಿದೆ.

ಮುಖ್ಯಮಂತ್ರಿ ಮತ್ತು ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿದ್ದು, ಶೀಘ್ರವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಬಕಾರಿ ಸಚಿವ ರೇಣುಕಾಚಾರ್ಯ ತಿಳಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಈ ವ್ಯವಸ್ಥೆ ಜಾರಿಗೊಳಿಸಲಾಗುವುದು. ಆಂಧ್ರ ಸೇರಿದಂತೆ ನೆರೆ ರಾಜ್ಯಗಳಲ್ಲಿ ಮದ್ಯ ಮಾರಾಟ ಅವಧಿಯನ್ನು ಹಿಂದೆಯೇ ಸಡಿಲಿಸಲಾಗಿದೆ.

ರಾಜ್ಯದಲ್ಲಿ ರಾತ್ರಿ 11.30ರವರೆಗೆ ಮಾತ್ರ ಮಾರಾಟಕ್ಕೆ ಅವಕಾಶವಿದೆ. ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಮಧ್ಯರಾತ್ರಿ ಆಗಮಿಸುವ ವಿಮಾನ ಪ್ರಯಾಣಿಕರು, ರಾತ್ರಿ ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ, ಪ್ರವಾಸಿಗರು ಅವಧಿ ವಿಸ್ತರಣೆಗೆ ಬೇಡಿಕೆ ಇಟ್ಟಿದ್ದಾರೆ. ಉದ್ಯಮ ವಲಯದಿಂದಲೂ ಬೇಡಿಕೆ
ಬಂದಿದೆ. ಮುಖ್ಯಮಂತ್ರಿ ಜತೆ ಈ ವಿಷಯ ಪ್ರಸ್ತಾಪಿಸಲಾಗಿದೆ.

ಅವಧಿ ವಿಸ್ತರಣೆಯ ಸಾಧಕ-ಬಾಧಕಗಳ ಅಧ್ಯಯನ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ ಮುಖ್ಯ ಮಂತ್ರಿ ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳ ಜತೆ ಅಂತಿಮವಾಗಿ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+