ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಡ್ಡಿಗಳ ಅನರ್ಹಕ್ಕೆ ರಾಜ್ಯಪಾಲರ ಪಟ್ಟು

By Mrutyunjaya Kalmat
|
Google Oneindia Kannada News

HR Bhardwaj
ಬೆಂಗಳೂರು, ಮೇ. 18 : ಲಾಭದಾಯಕ ಹುದ್ದೆ ಆರೋಪದ ಮೇಲೆ ಬಳ್ಳಾರಿಯ ಮೂವರು ಸಚಿವರ ಶಾಸಕ ಸ್ಥಾನ ಅನರ್ಹಗೊಳಿಸಲು ಶಿಪಾರಸ್ಸಿಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದ್ದು ಅನಿವಾರ್ಯವಾಗಿದೆ ಎಂದು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಹೇಳಿದ್ದಾರೆ. ಈ ಮೂಲಕ ಗಣಿ ಸಚಿವರು ಮತ್ತು ತಮ್ಮ ನಡುವೆ ನಡೆಯುತ್ತಿರುವ ಜಟಾಪಟಿಗೆ ತಾರ್ಕಿಕ ಅಂತ್ಯ ಕಾಣಿಸಲು ನಿರ್ಧರಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ ನಂತರ ರಾಜಭವನದ ಮುಂಭಾಗದ ಮೆಟ್ಟಿಲುಗಳ ಮೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೂ ಇದೇ ಮಾತನ್ನು ಸ್ಪಷ್ಟಪಡಿಸಿದ್ದೇನೆ ಎಂದರು. ಪ್ರವಾಸೋದ್ಯಮ ಸಚಿವ ಜನಾರ್ದನರೆಡ್ಡಿ, ಕಂದಾಯ ಸಚಿವ ಕರುಣಾಕರರೆಡ್ಡಿ ಮತ್ತು ಕುಟುಂಬ ಕಲ್ಯಾಣ ಮಂತ್ರಿ ಬಿ ಶ್ರೀರಾಮುಲು ವಿರುದ್ಧ ಚುನಾವಣೆ ವೇಳೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದ್ದವು.

ರಾಜ್ಯಸರಕಾರ ಆ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿವೆ. ಅದು ಕಾನೂನು ಬಾಹಿರ ಕ್ರಮವಾಗಿದೆ. ಆದ್ದರಿಂದಲೇ ಚುನಾವಣಾ ಆಯೋಗ ಈ ಬಗ್ಗೆ ಪರಿಶೀಲನೆ ಮಾಡಿ ಶಿಫಾರಸ್ಸು ಮಾಡುವಂತೆ ತಮಗೆ ಪತ್ರ ಬರೆದಿತ್ತು. ಈ ಬಗ್ಗೆ ತಾವು ಪರಿಶೀಲಿಸಿರುವುದಾಗಿ ಅವರು ಸಮರ್ಥಿಸಿಕೊಂಡರು. ಅಲ್ಲದೇ ವಿಧಾನ ಪರಿಷತ್ ಸದಸ್ಯ ಕೆ ಸಿ ಕೊಂಡಯ್ಯ ಅವರು ಸಾಕ್ಷಿ ಸಮೇತ ದೂರು ನೀಡಿದ್ದರು. ಈ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸಚಿವರಿಗೆ ದೂರು ನೀಡಲಾಗಿತ್ತು ಎಂದು ರಾಜ್ಯಪಾಲರು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X