ಗೋಪಿಶೆಟ್ಟಿಕೊಪ್ಪ ಕೆರೆ ಅಭಿವೃದ್ಧಿಗೆ ಕ್ರಮ: ಸಿಎಂ
ಶಿವಮೊಗ್ಗ,
ಮೇ 19: ನಗರ ಸಮೀಪದ ಗೋಪಿಶೆಟ್ಟಿಕೊಪ್ಪ, ನಿಧಿಗೆ ಮತ್ತು ಪುರಲೆಯ ಕೆರೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. id="toptextpromo">ಗೋಪಿಶೆಟ್ಟಿಕೊಪ್ಪದ
ಕೆರೆಯ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡುತ್ತಿದ್ದರು. 37.5 ಎಕರೆ ವಿಶಾಲವಾಗಿರುವ ಗೋಪಿಶೆಟ್ಟಿಕೊಪ್ಪದ ಕೆರೆಯನ್ನು ಧಾರವಾಡದ ಕೆರೆಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವುದು, ವಾಕಿಂಗ್‌ಟ್ರ್ಯಾಕ್ ಹಾಗೂ ಉದ್ಯಾನವನ ನಿರ್ಮಾಣ ಕಾಮಗಾರಿಯನ್ನು ಈ ತಿಂಗಳ ಅಂತ್ಯದೊಳಗಾಗಿ ಆರಂಭಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. id='are-slot-1' class='oiad oi-axt oiadv'> id='top-searched-articles'>ಕೆರೆಗೆ
ಬರುವ ಕೊಳಚೆ ನೀರನ್ನು ತಡೆಯಲು, ಈಗಿರುವ ನೀರನ್ನು ಇತರೆ ಬಳಕೆಗೆ ಅನುಕೂಲವಾಗುವಂತೆ ಹಾಗೂ ಅಗತ್ಯ ವಿದ್ದರೆ ಕೆರೆಯ ಹೂಳುತೆಗೆದು ಅಭಿವೃದ್ಧಿ ಪಡಿಸಲಾಗುವುದೆಂದರು. ಈ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಂಸದ ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ. ಹೇಮಚಂದ್ರ, ಮುಂತಾದವರು ಉಪಸ್ಥಿತರಿದ್ದರು.











Click it and Unblock the Notifications