ಹಾಲಪ್ಪನ ನಂತರ ಪ್ರತಾಪಪ್ಪನ ಪ್ರತಾಪ

ಸ್ನೇಹಿತನ ಹೆಂಡತಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ತಾಲೂಕಿನ ಯುವ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಂಧಿತರಾಗಿದ್ದಾನೆ. ಹಾಲಪ್ಪ ಪ್ರಕರಣ ಬಿಜೆಪಿಯನ್ನು ಮುಜುಗರಕ್ಕೆ ಸಿಕ್ಕಿಸಿದ್ದರೆ, ಈ ಪ್ರಕರಣ ಕಾಂಗ್ರೆಸ್ಸಿನ ವರ್ಚಸ್ಸಿಗೆ ಮಸಿ ಬಳಿದಂತಾಗಿದೆ.
ಘಟನೆಯ ಹಿನ್ನೆಲೆ : ಅತ್ಯಾಚಾರಕ್ಕೊಳಗಾಗಿರುವ ಮಹಿಳೆಯ ಗಂಡನ ಗೆಳೆಯ ಪ್ರತಾಪ್ ಸಿಂಗ್. ಮಹಿಳೆಯ ಗಂಡ ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಉದ್ಯೋಗದಲ್ಲಿರುವುದರಿಂದ ಮತ್ತು ಅವರ ಮನೆಯಲ್ಲಿ ಬೇರೆ ಗಂಡಸರು ಇಲ್ಲದ್ದರಿಂದ ಅವರ ಮನೆ ನಿರ್ಮಾಣದ ಉಸ್ತುವಾರಿ ಪ್ರತಾಪ್ ನೋಡಿಕೊಳ್ಳುತ್ತಿದ್ದ.
ಮನೆ ನಿರ್ಮಾಣ ಕೆಲಸಕ್ಕಾಗಿ ಸ್ನೇಹಿತನ ಮನೆಗೆ ಹೋಗುತ್ತಿದ್ದ ಪ್ರತಾಪ್, ಒಂದು ದಿನ ಸ್ನೇಹಿತನ ಹೆಂಡತಿಗೆ ಮತ್ತು ಬರಿಸಿ ಅತ್ಯಾಚಾರವೆಸಗಿದ್ದಾನೆ. ಅಷ್ಟು ಮಾತ್ರವಲ್ಲದೆ, ಅತ್ಯಾಚಾರ ಮಾಡಿದ್ದನ್ನು ಚಿತ್ರಿಸಿ ಸಿಡಿ ತಯಾರಿಸಬೇಕೆಂದು ತನ್ನ ಇತರ ಸ್ನೇಹಿತರಿಗೆ ಕಳಿಸಿದ್ದಾನೆ. ಆ ಸ್ನೇಹಿತರು ಅಶ್ಲೀಲ ವಿಡಿಯೋ ತುಣುಕನ್ನು ಊರಿಗೆಲ್ಲ ತಿಳಿಯುವಂತೆ ಮಾಡಿದ್ದಾರೆ.
ಅತ್ಯಾಚಾರ ಕೆಲ ತಿಂಗಳುಗಳ ಹಿಂದೆ ನಡೆದಿದ್ದು, ಅಶ್ಲೀಲ ವಿಡಿಯೋ ಇತ್ತೀಚೆಗೆ ಮಹಿಳೆಯ ಸಂಬಂಧಿಕರಿಗೂ ದಕ್ಕಿದೆ. ಕೂಡಲೆ ಅವರು ಪೊಲೀಸರಿಗೆ ದೂರು ನೀಡಬೇಕೆಂದು ಆಗ್ರಹಿಸಿದ್ದಾರೆ. ದೂರು ನೀಡಿದ ಮೇಲೆ ತಲೆಮರೆಸಿಕೊಂಡಿದ್ದ ಪ್ರತಾಪ್ ಸಿಂಗ್ ನನ್ನು ಕಾರವಾರ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇದನ್ನು ಅತ್ಯಾಚಾರ ಪ್ರಕರಣವೆಂದು ದಾಖಲಿಸಿಯಾಗಿದೆಯಾದರೂ, ವಿಡಿಯೋ ತುಣುಕನ್ನು ನೋಡಿದವರು ಇಬ್ಬರೂ ಸಮ್ಮತಿಸಿಯೇ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದಿದ್ದಾರೆ. ಪೊಲೀಸರು ಅತ್ಯಾಚಾರ ನಡೆಸಿರುವುದರ ಸತ್ಯಾಸತ್ಯತೆಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications