ವಿಮಾನ ಅಪಘಾತ; ಮಳೆಯ ನಡುವೆ ರಕ್ಷಣಾ ಕಾರ್ಯ
ಮಂಗಳೂರು,
ಮೇ.22: ಬಜ್ಪೆ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ಎಕ್ಸ್ ಪ್ರೆಸ್ 812ವಿಮಾನದಲ್ಲಿನ ಶವಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ನಡೆಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿಯಾಗಿದ್ದರೂ 70ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. id="toptextpromo">ಒಟ್ಟು
166 ಮಂದಿ ಸಾವಪ್ಪಿರುವ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ವಿಮಾನ ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೃತರ ಕುಟುಂಬಕ್ಕೆ ತಲಾ ರು.2 ಲಕ್ಷಗಳ ಪರಿಹಾರ ಧನವನ್ನು ಘೋಷಿಸಲಾಗಿದೆ.ದುರಂತದಲ್ಲಿ ಆರು ಮಂದಿ ಬದುಕುಳಿದಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಮಂಗಳೂರಿನ
ಎಜೆ ಆಸ್ಪತ್ರೆಯಲ್ಲಿ ಬದುಕುಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಂಗಳೂರು ಜಿಲ್ಲಾ ಉತ್ಸುವಾರಿ ಸಚಿವ ಕೃಷ್ಣ ಜೆ ಪಾಲೇಮಾರು, ಗೃಹಸಚಿವ ಡಾ.ವಿ.ಎಸ್.ಆಚಾರ್ಯ ಮತ್ತು ಸಂಸದ ನಳಿನ್ ಕುಮಾರ್ ಕಟೀಲು ಈಗಾಗಲೆ ಅಪಘಾತ ನಡೆದ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.











Click it and Unblock the Notifications