ಮೃತರ ಕುಟುಂಬಕ್ಕೆ ರು.2 ಲಕ್ಷ ಪರಿಹಾರ ಘೋಷಣೆ
ನವದೆಹಲಿ,
ಮೇ.22: ಮಂಗಳೂರಿನಲ್ಲಿ ಶನಿವಾರ ಮುಂಜಾನೆ ನಡೆದ ಭೀಕರ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದ ಬಗ್ಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ರು.2 ಲಕ್ಷ ಪರಿಹಾರ ಧನವನ್ನು ಪ್ರಧಾನಿ ಇಂದು ಘೋಷಿಸಿದರು. id="toptextpromo">ಯುಪಿಎ
ಸರಕಾರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಶನಿವಾರ ಸಂಜೆ ನಡೆಯಬೇಕಾಗಿದ್ದ ಸಮಾರಂಭವನ್ನು ವಿಮಾನ ದುರಂತ ನಡೆದ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ವಿಮಾನ ದುರಂತದಲ್ಲಿ ಗಾಯಗೊಂಡವರಿಗೆ ತಲಾ ರು.50 ಸಾವಿರ ಪರಿಹಾರ ಧನವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಘೋಷಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ಮಂಗಳೂರು
ವಿಮಾನ ನಿಲ್ದಾಣದಲ್ಲಿ ರಕ್ಷಣಾ ಕಾರ್ಯದ ಮೇಲುಸ್ತುವಾರಿ ನೋಡಿಕೊಳ್ಳುತ್ತಿರುವ ನಾಗರಿಕ ವಿಮಾನಯಾನ ಸಚಿವ ಪ್ರಪುಲ್ ಪಟೇಲ್ ಹಾಗೂ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಅವರೊಂದಿಗೆ ಪ್ರಧಾನಿಗಳು ದೂರವಾಣಿ ಮುಖಾಂತರ ಮಾತನಾಡಿ ವಿವರಗಳನ್ನು ತಿಳಿದುಕೊಂಡರು.











Click it and Unblock the Notifications