ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಕ್ಷಣಾ ಸಿಬ್ಬಂದಿಗಳಿಗೆ ರಾಷ್ಟ್ರಪತಿ ಸೇವಾ ಪದಕ

By Prasad
|
Google Oneindia Kannada News

Firefighter carrying a victim on Mangalore air crash
ಬೆಂಗಳೂರು, ಮೇ 25 : ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತ ಸಂದರ್ಭದಲ್ಲಿ ಅಗ್ನಿಶಾಮಕ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ನಿರ್ವಹಿಸಿರುವ ಸೇವಾಕಾರ್ಯವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಶ್ಲಾಘಿಸಿದ್ದಾರೆ. ಈ ದಳದವರಿಗೆ ವಿದೇಶದಲ್ಲಿ ಬಳಸುವಂಥ ಆಧುನಿಕ ಸಲಕರಣೆ ಒದಗಿಸಿದರೆ ಇನ್ನೂ ಉತ್ತಮ ರೀತಿಯಲ್ಲಿ ರಕ್ಷಣಾ ಕಾರ್ಯ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಹಾಗು ಗೃಹ ರಕ್ಷಕ ಮತ್ತು ಪೌರರಕ್ಷಣಾ ದಳದಲ್ಲಿ ವಿಶಿಷ್ಟ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿರುವ 73 ಮಂದಿ ಅಧಿಕಾರಿ ಹಾಗು ಸಿಬ್ಬಂದಿಯವರಿಗೆ 2008-09ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರೋತ್ಸವದ ಸಂದರ್ಭದ ರಾಷ್ಟ್ರಪತಿ ಸೇವಾ ಪದಕವನ್ನು ನೀಡಿ ಗೌರವಿಸಿ ಅವರು ಮಾತನಾಡುತ್ತಿದ್ದರು.

ಸಮಾರಂಭದ ಅಧ್ಯಕ್ಷತೆವಹಿಸಿದ್ದ ಗೃಹ ಸಚಿವ ವಿಎಸ್ ಆಚಾರ್ಯ ಅವರು ಮಾತನಾಡಿ, ಗೃಹರಕ್ಷಕ ದಳ ಪೌರರಕ್ಷಣೆ ಹಾಗು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಗಳು 24 ತಾಸುಗಳು ಸಾರ್ವಜನಿಕ ಸೇವಾ ಕಾರ್ಯದಲ್ಲಿ ತೊಡಗಿದ್ದು ತಮ್ಮ ಜೀವದ ಹಂಗನ್ನು ತೊರೆದು ಪ್ರಕೃತಿ ವಿಕೋಪದ ವಿವಿಧ ಸಂದರ್ಭಗಳಲ್ಲಿ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗುತ್ತಾರೆ. ಅವರ ಈ ಸೇವೆಯನ್ನು ಪರಿಗಣಿಸಿ ರಾಷ್ಟ್ರಪತಿ ಪದಕಗಳನ್ನು ನೀಡಿ ಗೌರವಿಸಲಾಗುತ್ತಿದೆ. ಪದಕ ಪಡೆದವರಂತೇ ಉಳಿದವರೂ ಕೂಡ ಮುಂದಿನ ದಿನಗಳಲ್ಲಿ ಉತ್ತಮ ಸೇವೆಯನ್ನು ನೀಡುವ ಮೂಲಕ ಪದಕವನ್ನು ಪಡೆದುಕೊಳ್ಳುವಂತೆ ಹುರುದುಂಬಿಸಿದರು.

ಗೃಹರಕ್ಷಕದಳ, ಪೌರರಕ್ಷಣೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರಾದ ಜೀಜಾ ಮಾಧವನ್ ಹರಿಸಿಂಗ್ ಅವರು ಸ್ವಾಗತಿಸಿದರು. ಪೊಲೀಸ್ ಮಹಾ ನಿರ್ದೇಶಕರಾದ ಅಜಯ್ ಕುಮಾರ್‌ಸಿಂಗ್, ಗೃಹ ಕಾರ್ಯದರ್ಶಿ ಶಿವಕುಮಾರ್, ರಾಜ್ಯಪಾಲರ ಕಾರ್ಯದರ್ಶಿಗಳಾದ ಕೃಷ್ಣರಾವ್ ದೂರದರ್ಶನ ನಿರ್ದೇಶಕರಾದ ಮಹೇಶ್ ಜೋಷಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X