ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೈಸೂರು:ಪರಿಷತ್ ಚುನಾವಣೆ ಕಾರ್ಯ ಸೂಚಿ

By Mahesh
|
Google Oneindia Kannada News

South Graduates Constituency upper house election
ಮೈಸೂರು, ಮೇ 25: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಕಾರ್ಯಸೂಚಿಯನ್ನು ಭಾರತ ಚುನಾವಣಾ ಆಯೋಗವು ನೀಡಿದ್ದು ಮೇ 28 ರಂದು ಅಧಿಸೂಚನೆಯನ್ನು ಹೊರಡಿಸಲಾಗುವುದು. ಜೂನ್ 4, 2010ರ ಶುಕ್ರವಾರದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಜೂನ್ 5ರ ಶನಿವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಜೂನ್7ರ ಸೋಮವಾರ ಕಡೆಯ ದಿನವಾಗಿದೆ. ಚುನಾವಣೆಯ ಅವಶ್ಯಕತೆಯಿದ್ದಲ್ಲಿ ಮತದಾನವನ್ನು ಜೂನ್ 21, 2010ರ ಸೋಮವಾರದಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಸಲಾಗುವುದು.

ಮತಗಳ ಎಣಿಕೆ ಕಾರ್ಯವು ಜೂನ್ 24ರ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ನಡೆಯಲಿದ್ದು, ಚುನಾವಣಾ ಪ್ರಕ್ರಿಯೆಗಳು ಜೂನ್ 26ರ ಶನಿವಾರದಂದು ಮುಕ್ತಾಯವಾಗಲಿದೆ. ಈ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30ಕ್ಕೂ ಕಡಿಮೆ ಇರಕೂಡದು ಮತ್ತು ಅವರು ಕರ್ನಾಟಕದ ಯಾವುದಾದರೊಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು. ಹಾಗೂ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು.

ನಾಮಪತ್ರದೊಂದಿಗೆ ಮತದಾರರಾಗಿದ್ದ ಬಗ್ಗೆ ಸಂಬಂಧಿಸಿದ ಮತದಾನ ನೋಂದಣಾಧಿಕಾರಿ / ಸಹಾಯಕ ನೊಂದಣಾಧಿಕಾರಿಗಳಿಂದ ಮತದಾನ ಪಟ್ಟಿಯ ದೃಢೀಕೃತ ನಕಲನ್ನು ಲಗತ್ತಿಸಬೇಕು. ದಕ್ಷಿಣ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೊಂದಾಯಿತರಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.

ಚುನಾವಣೆಗೆ ಸಂಬಂಧಿಸಿದಂತೆ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರು ಚುನಾವಣಾಧಿಕಾರಿ ಹಾಗೂ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಕರ್ನಾಟಕ ದಕ್ಷಿಣ ಪದವೀಧರರ ಕ್ಷೇತ್ರದ ವ್ಯಾಪ್ತಿಗೊಳಪಟ್ಟಿದ್ದು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಿಗೆ (ಪ್ರಾದೇಶಿಕ ಆಯುಕ್ತರು) ಮಾತ್ರ ಸಲ್ಲಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರೂ ಆದ ಎಂ.ವಿ. ಜಯಂತಿ ಅವರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ / ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X