ಹೊಗೇನಕಲ್ ವಿವಾದಕ್ಕೆ ಶೀಘ್ರ ಮುಲಾಮು
ಬೆಂಗಳೂರು,
ಮೇ. 26 : ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಉಂಟಾಗಿರುವ ಹೊಗೇನಕಲ್ ಜಲವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಎರಡು ರಾಜ್ಯಗಳ ಕಾರ್ಯದರ್ಶಿಗಳು ಚರ್ಚೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. id="toptextpromo">ಮಾಧ್ಯಮ
ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಹೋರಾಟದಿಂದ ಹೊಗೇನಕಲ್ ವಿವಾದ ಬಗೆಹರಿಯುವುದಿಲ್ಲ. ರಾಜ್ಯಗಳು ಸ್ನೇಹ ಸೌಹಾರ್ದತೆಯಿಂದ ಮಾತುಕತೆ ನಡೆಸಿ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕಿದೆ ಎಂದರು. ಹೊಗೇನಕಲ್ ವಿವಾದವನ್ನು ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಈಗಾಗಲೇ ಪ್ರಧಾನಮಂತ್ರಿಯವರಿಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು. id='are-slot-1' class='oiad oi-axt oiadv'> id='top-searched-articles'>ಸರಕಾರ
ನೀಡಿದ್ದ ಭರವಸೆಯಂತೆ ರೈತರ ಮೇಲಿದ್ದ ಮೊಕದ್ದಮೆಗಳನ್ನು ವಾಪಸ್ಸು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ಅದೇ ರೀತಿ ಕನ್ನಡ ಪರ ಹೋರಾಟಗಾರರ ಮೇಲಿರುವ ಕೇಸ್ ಗಳನ್ನು ವಾಪಸ್ಸು ಪಡೆಯುವ ಬಗ್ಗೆ ಸಹಾನುಭೂತಿಯಿಂದ ಪರಿಶೀಲನೆ ನಡೆಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.











Click it and Unblock the Notifications