ಕರ್ನಾಟಕಕ್ಕೆ ವೆಂಕಯ್ಯ ಕೊಡುಗೆ ಏನು? : ಕರವೇ

Karave Protest over Venkaiah Naidu Nomination
ಬೆಂಗಳೂರು, ಜೂ. 2: ರಾಜ್ಯದಿಂದ ಎರಡೂ ಬಾರಿ ರಾಜ್ಯಸಭೆಗೆ ಆರಿಸಿ ಕಳಿಸಿದ್ದರೂ ಕೂಡ, ಕನ್ನಡ ಪರ ಕಾಳಜಿ ಇಲ್ಲದಿರುವ ವೆಂಕಯ್ಯ ನಾಯ್ಡು ಅವರನ್ನು ಮತ್ತೆ ಆರಿಸಿ ಕಳಿಸುವುದು ಮೂರ್ಖತನ. ಕರ್ನಾಟಕ ಬಿಜೆಪಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣ ಗೌಡ ಗುಡುಗಿದ್ದಾರೆ.

ನೂರಾರು ಕಾರ್ಯಕರ್ತರೊಂದಿಗೆ ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ನಾರಾಯಣಗೌಡ, ಆಂಧ್ರಪ್ರದೇಶದ ವೆಂಕಯ್ಯ ನಾಯ್ಡು ಅವರನ್ನು ರಾಜ್ಯದಿಂದ ರಾಜ್ಯಸಭೆಯ ಸದಸ್ಯರನ್ನಾಗಿ ಮಾಡಬಾರದು ಎಂದು ಆಗ್ರಹಿಸಿದರು.

ಹೊಗೇನಕಲ್ ವಿವಾದ, ಕೃಷ್ಣ-ಆಲಮಟ್ಟಿ ಜಲ ವಿವಾದದ ಸಂದರ್ಭದಲ್ಲಿ ಮೌನವಾಗಿದ್ದು, ಆಂಧ್ರದ ಪರ ನಿಲುವು ತೋರಿದ ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಬಾರದು ಎಂದು ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕನ್ನಡಕ್ಕೆ ದ್ರೋಹ ಬಗೆದಿರುವ ನಾಯ್ಡು ಅವರನ್ನು ರಾಜ್ಯಸಭೆಗೆ ಕಳುಹಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ ಎಂದು ನಾರಾಯಣಗೌಡ ಈ ಸಂದರ್ಭದಲ್ಲಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+