ವಿಶ್ರಾಂತ ಕುಲಪತಿ ಮೇಲೆ ಕ್ರಿಮಿನಲ್ ಕೇಸ್

ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ದೇ.ಜವರೇಗೌಡ ಅವರ ಪುತ್ರರೂ ಆಗಿರುವ ಶಶಿಧರ ಪ್ರಸಾದ್ ಕುಲಪತಿಯಾಗಿದ್ದ ಅವಧಿಯಲ್ಲಿ ವಿ.ವಿ.ಯ ನೇಮಕಾತಿಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಬಂದಿದ್ದವು. ಸಿಎಂ ಯಡಿಯೂರಪ್ಪ ಅವರ ನಿರ್ದೇಶನದಂತೆ ಉನ್ನತ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿತ್ತು.
ಈಗ ಕರ್ನಾಟಕ ವಿಶ್ವವಿದ್ಯಾಲಯ ಕಾಯ್ದೆ 2000 ಪ್ರಕರಣ 8(4) ಅನ್ವಯ ಕ್ರಿಮಿನಲ್ ಮೊಕದ್ದಮೆ ಹೂಡಲು ವಿಶ್ವವಿದ್ಯಾಲಯಕ್ಕೆ ಸೂಚಿಸಲಾಗಿದ್ದು, ಅಕ್ರಮವಾಗಿ ನೇಮಕವಾಗಿರುವ ಸಿಬ್ಬಂದಿಯ ವಿರುದ್ಧ ವರದಿಯ ಶಿಫಾರಸುಗಳ ಅನ್ವಯ ಕ್ರಮಕೈಗೊಳ್ಳಲು ಸರ್ಕಾರದ ಮಟ್ಟದಲ್ಲಿ ಪರಿಶೀಲನೆ ನಡೆದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿಶ್ರಾಂತ ಕುಲಪತಿಯೊಬ್ಬರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಆದೇಶಿಸಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ. ನ್ಯಾಯಮೂರ್ತಿ ಎಚ್. ರಂಗವಿಠಲಾಚಾರ್ ನೇತೃತ್ವದ ಏಕಸದಸ್ಯ ಸಮಿತಿ ನೀಡಿದ್ದ ವರದಿಯನ್ನು ಅಂಗೀಕರಿಸಿದ ರಾಜ್ಯ ಸರ್ಕಾರ ಕ್ರಿಮಿನಲ್ ಮೊಕದ್ದಮೆ ಹೂಡಲು ಆದೇಶಿಸಿದೆ.











Click it and Unblock the Notifications