ದೇವೇಗೌಡರಿಗೆ ಉತ್ತರ ಕೊಡುವ ಅಗತ್ಯವಿಲ್ಲ; ಸಿಎಂ

ಹಾವೇರಿ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಗನ್ನಾಥ ಶೆಟ್ಟಿ ಆಯೋಗ ನೀಡಿರುವ ವರದಿ ಅಂಗೀಕರಿಸಿದರೆ ರಾಜ್ಯ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ದೇವೇಗೌಡರು ಭವಿಷ್ಯ ನುಡಿದಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇಂತಹವರ ಪ್ರಶ್ನೆಗಳಿಗೆಲ್ಲಾ ಉತ್ತರಿಸುವ ಅಗತ್ಯವಿಲ್ಲ ಎಂದರು.
ಹಾವೇರಿ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ನಾಥ ಶೆಟ್ಟಿ ನೀಡಿರುವ ವರದಿಯ ಬಗ್ಗೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಯಡಿಯೂರಪ್ಪ ಹೇಳಿದರು. ಜಗನ್ನಾಥ ಶೆಟ್ಟಿ ವರದಿಯನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅಧ್ಯಯನ ನಡೆಸಿದ ಬಳಿಕ ಸದನದಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿಸಿದರು.
ಜಗನ್ನಾಥ ಶೆಟ್ಟಿ ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ದೇವೇಗೌಡರು ಸರ್ವ ಸ್ವತಂತ್ರರು. ಅವರ ಪ್ರತಿಕ್ರಿಯೆಗೆ ಉತ್ತರ ಅಗತ್ಯವಿಲ್ಲ ಎಂದರು. ಮಾಧ್ಯಮಗಳು ಅನಗತ್ಯ ವಿಚಾರಗಳನ್ನು ದೊಡ್ಡದು ಮಾಡಿ ತೋರಿಸುವುದು ಸರಿಯಲ್ಲ ಎಂದು ಮಾಧ್ಯಮಗಳ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದರು.












Click it and Unblock the Notifications