ಮಾಜಿ ಕಾರ್ಪೊರೇಟರ್ ಮೇಲೆ ಹಲ್ಲೆ

Former Corporator Govind Raj
ಬೆಂಗಳೂರು, ಜೂ.20: ನಗರದ ಮಲ್ಲೇಶ್ವರಂನಲ್ಲಿ ಇಂದು ಬೆಳಗ್ಗೆ ಮಾಜಿ ಕಾರ್ಪೊರೇಟರ್ ಗೋವಿಂದ ರಾಜು ಅವರ ಮೇಲೆ ಮರಣಾಂತಿಕ ಹಲ್ಲೆ ನಡೆದಿದೆ.

ತೀವ್ರವಾಗಿ ಗಾಯಗೊಂಡಿರುವ ಗೋವಿಂದರಾಜು ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಅಸ್ಪತ್ರೆಗೆ ಭೇಟಿ ನೀಡಿ ಗೋವಿಂದರಾಜು ಅವರ ಆರೋಗ್ಯ ವಿಚಾರಿಸಿದ್ದಾರೆ.

ಇಂದು ಬೆಳಗ್ಗೆ ಮಲ್ಲೇಶ್ವರಂನ ಹೋಟೆಲ್ ವೊಂದರಲ್ಲಿ ಗೊವಿಂದರಾಜು ಅವರು ಕಾಫಿ ಕುಡಿಯುತ್ತಿದ್ದ ಸಮಯದಲ್ಲಿ ಅವರ ಮೇಲೆ ಮೂರು ಜನ ದುಷ್ಕರ್ಮಿಗಳ ತಂಡ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದೆ.

ದುಷ್ಕೃತ್ಯಗೈದವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗೋವಿಂದರಾಜು ಸುಭಾಷ್ ನಗರ ವಾರ್ಡ್ ನ ಮಾಜಿ ನಗರಪಾಲಿಕೆ ಸದಸ್ಯರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+