ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೀತಾ ರಸಪ್ರಶ್ನೆ : ನೊಂದಾವಣೆಗೆ ಜೂ.30 ಕಡೆ ದಿನ

By Prasad
|
Google Oneindia Kannada News

Bhagavad Gita quiz for school students
ಬೆಂಗಳೂರು, ಜೂ. 24 : ಕಲ್ಚರಲ್ ಇಂಡಿಯಾ ಸಂಸ್ಥೆ ಕಲ್ಕೂರ ಪ್ರತಿಷ್ಠಾನದ ಸಹಯೋಗದಲ್ಲಿ ರಾಜ್ಯಾದ್ಯಂತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗೀತಾ ದ್ಯುತಿ 2010 ರಾಜ್ಯಮಟ್ಟದ ಭಗವದ್ಗೀತಾ ಪ್ರಶ್ನೋತ್ತರ ಸ್ಪರ್ಧೆಯನ್ನು ಪ್ರಾರಂಭಿಸಿದೆ.

ಭಗವದ್ ಗೀತೆ ರಸಪ್ರಶ್ನೆ ಕಾರ್ಯಕ್ರಮವನ್ನು ಜೂನ್ 5ರಂದು ಉಡುಪಿಯಲ್ಲಿ ಶ್ರೀಕೃಷ್ಣನ ಸನ್ನಿಧಿಯಲ್ಲಿ ಶೀರೂರು ಶ್ರೀಕೃಷ್ಣಮಠದ ಪರಮಪೂಜ್ಯ ಶ್ರೀಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದಂಗಳವರು ಉದ್ಘಾಟಿಸಿದರು.

8, 9, 10ನೇ ತರಗತಿಯಲ್ಲಿ ಓದುತ್ತಿರುವ ಪ್ರೌಢಶಾಲಾ ವಿದ್ಯಾರ್ಥಿಗಳು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ 220 ಪುಟಗಳ 700 ಶ್ಲೋಕ, ತಾತ್ಪರ್ಯ, ವಿಶಿಷ್ಟ ಅಭ್ಯಾಸಗಳುಳ್ಳ ಭಗವದ್ಗೀತಾ ಪುಸ್ತಕ ಮತ್ತು ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಭಾಗವಹಿಸಿದ ಎಲ್ಲಾ ಶಾಲೆಗಳಿಂದ ಒಟ್ಟು 2000 ಅತ್ಯುತ್ತಮ ವಿದ್ಯಾರ್ಥಿಗಳಿಗೆ 2000 ಬಹುಮಾನಗಳೂ, ಸೆಮಿಫೈನಲ್, ಫೈನಲ್ಸ್ ತಲುಪಿದ ಎಲ್ಲ ವಿದ್ಯಾರ್ಥಿಗಳಿಗೆ ಒಟ್ಟು ರೂ. 42,300 ನಗದು ಬಹುಮಾನವನ್ನು ಸಹ ನೀಡಲಾಗುತ್ತದೆ.

ಜೂನ್ 30ರಂದು ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಕಡೆಯ ದಿನಾಂಕವಾಗಿರುತ್ತದೆ. ನೋಂದಣಿ ಹಾಗೂ ಹೆಚ್ಚಿನ ವಿವರಗಳಿಗೆ ಶಾಲೆಗಳು, ಶಿಕ್ಷಕರು, ವಿದ್ಯಾರ್ಥಿಗಳು 97315 92869 ಸಂಪರ್ಕಿಸಬಹುದು ಅಥವಾ www.culturalindia.org ವೆಬ್‌ಸೈಟಿಗೆ ಭೇಟಿ ನೀಡಬಹುದು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X