ಲೋಕಾಯುಕ್ತ ರಾಜೀನಾಮೆ: ನಮ್ಮ ಕೈವಾಡವಿಲ್ಲ

Reddy Denies his hand in Lokayuka resgination
ಬೆಂಗಳೂರು, ಜೂ.24: ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ರಾಜೀನಾಮೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಆದರೆ ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಅವರು ನೀಡಿರುವ ವರದಿ ಸುಳ್ಳು ಹಾಗೂ ಅದರಲ್ಲಿ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಪ್ರವಾಸೋದ್ಯಮ ಸಚಿವ ಜರ್ನಾದನರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜರ್ನಾದನರೆಡ್ಡಿ ಅವರು, ಅಕ್ರಮ ಗಣಿಗಾರಿಕೆ ನಡೆದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ನಾವಾಗಲಿ(ರೆಡ್ಡಿ ಸೋದರರು) ನಮ್ಮ ಸರ್ಕಾರವಾಗಲಿ ಸಂತೋಷ್ ಹೆಗಡೆ ಅವರಿಗೆ ಕಿರುಕುಳ ನೀಡಿಲ್ಲ. ಯಾವ ಬೆದರಿಕೆಯನ್ನು ಒಡ್ಡಿಲ್ಲ. ಅವರು ರಾಜೀನಾಮೆ ನೀಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.

ಉಪ ಲೋಕಾಯುಕ್ತರ ನೇಮಕ, ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವುದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಬೇಕಿರುವ ವಿಷಯ. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಲೋಕಾಯುಕ್ತರು ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಈ ದಿಢೀರ್ ನಿರ್ಧಾರ ಅಚ್ಚರಿ ತಂದಿದೆ. ಸಂತೋಷ್ ಹೆಗ್ಡೆ ಅವರ ಮನವೊಲಿಕೆ ಪ್ರಯತ್ನ ನಡೆಯುತ್ತಿದೆ. ಅವರು ಅಧಿಕಾರಕ್ಕೆ ಮರಳಿದರೆ ನಮ್ಮ ಅಭ್ಯಂತರವಿಲ್ಲ ಎಂದು ಜರ್ನಾದನ ರೆಡ್ಡಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+