ಮೂವತ್ತು ಕೋಟಿ ನಾಮ ಹಾಕಿದ 'ಚಾಣಕ್ಯ'ನ ಬಂಧನ

ಮೈಸೂರಿನಲ್ಲಿ ಪಂಗನಾಮ ಹಾಕುವ ಫೈನಾನ್ಸ್ ಕಂಪನಿಗಳ ಬಣ್ಣ ದಿನೇ ದಿನೇ ಬಯಲಾಗುತ್ತಿದ್ದರೂ ಜನ ಮರುಳೋ ಜಾತ್ರ ಮರುಳೋ ಎಂಬಂತೆ ಹಣ ಹೂಡುತ್ತಲೇ ಇದ್ದಾರೆ. ಚಾಣಕ್ಯ ಫೈನಾನ್ಸ್ ಕಂಪನಿಯ ಚಾಣಕ್ಯ ತಂತ್ರಕ್ಕೆ ಬಲಿಯಾದ ಜನ ಅದರಲ್ಲಿ ಹಣ ಹೂಡಿಕೆ ಮಾಡಿದ್ದರು. ಆದರೆ ಕಳೆದ ಒಂದು ವರ್ಷದಿಂದ ಬಡ್ಡಿ ಕೊಡದ ಕಾರಣ ಹೂಡಿಕೆದಾರರು ಅನುಮನಗೊಂಡು ಪೊಲೀಸರಿಗೆ ದೂರಿ ನೀಡಿದ್ದಾರೆ.
ಈ ಸಂಬಂಧ ಪೊಲೀಸರು ಇಂದು ಫೈನಾನ್ಸ್ ಕಂಪನಿಯ ಮಾಲೀಕ ನಂಜರಾಜ ಅರಸ್ ನನ್ನು ಬಂಧಿಸಿದ್ದಾರೆ. ತಮ್ಮ ಸಂಸ್ಥೆಯಲ್ಲಿ ಒಂದು ಲಕ್ಷ ರೂಪಾಯಿ ಹಣ ಹೂಡಿದರೆ ತಿಂಗಳಿಗೆ ಶೇ.10 ಬಡ್ಡಿ ಕೊಡುವುದಾಗಿ ನಂಬಿಸಲಾಗಿತ್ತು. ಆರಂಭದಲ್ಲಿ ಅಷ್ಟು ಬಡ್ಡಿಯನ್ನು ಕೊಡಲಾಗಿತ್ತು. ಇದನ್ನು ನಂಬಿದ ಹಲವಾರು ಮಂದಿ ಹಣ ಹೂಡಲು ಮುಂದಾಗಿದ್ದರು.
ಹೆಚ್ಚು ಹೆಚ್ಚು ಹಣ ಹೂಡಿದರೆ ಹೆಚ್ಚಿನ ಬಡ್ಡಿ ಕೊಡುವ ಆಸೆ ತೋರಿಸಲಾಗಿತ್ತು. ಐದು ಲಕ್ಷ ಹಣ ಹೂಡಿದರೆ ತಿಂಗಳಿಗೆ ಶೇ.15ರಷ್ಟು ಬಡ್ಡಿ ಕೊಡುವುದಾಗಿ ಹೇಳಲಾಗಿತ್ತು ಎಂದು ಹಣ ಹೂಡಿದರು ತಿಳಿಸಿದ್ದಾರೆ. ಆದರೆ ಕಳೆದ ಒಂದು ವರ್ಷದಿಂದ ಬಡ್ಡಿ ಕೊಡದ ಕಾರಣ ಬೇಸತ್ತ ಹೂಡಿಕೆದಾರರು ಪೊಲೀಸರಿಗೆ ದೂರು ನೀಡಿದ್ದರು.
ಬಂಧಿತ ನಂಜರಾಜ ಅರಸ್ ವಿರುದ್ಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಮೂಲತಃ ಮೈಸೂರಿನವನಾದ ಈತ ಕಳೆದ ಮೂರು ವರ್ಷಗಳಿಂದ ಈ ಫೈನಾನ್ಸ್ ಕಂಪನಿ ನಡೆಸುತ್ತಿದ್ದಾನೆ ಎನ್ನಲಾಗಿದೆ. ಕಂಪನಿ ರಿಜಸ್ಟರ್ ಸಹ ಆಗಿಲ್ಲ. ಹಣ ಹೂಡಿದವರೆಲ್ಲಾ ಸಣ್ಣಪುಟ್ಟ ವ್ಯಾಪಾರಸ್ಥರು, ಕೂಲಿ ನಾಲಿ ಮಾಡುವವರು, ಅನಕ್ಷರಸ್ಥರು.
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications