ರಾಷ್ಟ್ರೀಯ ಸೇನಾ ಸ್ಮಾರಕಕ್ಕೆ ಸುಪ್ರೀಂ ಅಸ್ತು

ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಲೋಧಾ ಮತ್ತು ಪಟ್ನಾಯಕ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಎತ್ತಿ ಹಿಡಿದಿದೆ.
ಪರಿಸರ ಪ್ರೇಮಿಗಳ ಅಳಲು: ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನವನದಲ್ಲಿ ಮರಗಳ ಮಾರಣಹೋಮ ನಡೆದಿದೆ. ರಾಜ್ಯ ಸರ್ಕಾರ ಸೇನಾ ಸ್ಮಾರಕ ನಿರ್ಮಾಣ ಮಾಡಲು ಮುಂದಾದರೆ, ಪರಿಸರದ ಮೇಲೆ ಪರಿಣಾಮ ಬೀರಲಿದೆ, ಕಾಮಗಾರಿಗೆ ತಡೆ ನೀಡಬೇಕು ಎಂದು ಕೋರಿ ಹೈಕೋರ್ಟ್ ನಲ್ಲಿ ಈ ಮುಂಚೆ ಅರ್ಜಿ ಸಲ್ಲಿಸಲಾಗಿತ್ತು.
ಆದರೆ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂದು ಕಾಮಗಾರಿಗೆ ಇದ್ದ ಆತಂಕವನ್ನು ತೊಡೆದು ಹಾಕಿರುವ ಸರ್ವೋಚ್ಛ ನ್ಯಾಯಲಯ, ನಾಲ್ಕುವಾರಗಳಲ್ಲಿ ಈ ಸಂಬಂಧ ಮಾಹಿತಿ ನೀಡುವಂತೆ ಆದೇಶ ನೀಡಿದೆ.












Click it and Unblock the Notifications