ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೈಲೋತ್ಪನ್ನ ಬೆಲೆ ಏರಿಕೆಗೆ ಬಳ್ಳಾರಿಯಲ್ಲಿ ಪ್ರತಿಭಟನೆ

By * ರೋಹಿಣಿ ಬಳ್ಳಾರಿ
|
Google Oneindia Kannada News

Fuel price hike : Protest in Bellary
ಬಳ್ಳಾರಿ, ಜು. 1 : ತೈಲೋತ್ಪನ್ನಗಳ ಬೆಲೆ ಏರಿಕೆ ಬಳ್ಳಾರಿ ಜಿಲ್ಲೆಯ ಜನತೆಗೂ ಬಿಸಿ ತಟ್ಟಿಸಿದೆ. ಇತರ ಅಗತ್ಯ ವಸ್ತುಗಳ ಬೆಲೆ ಕೂಡ ಮುಗಿಲು ಮುಟ್ಟಿದ್ದರಿಂದ ಪೆಟ್ರೋಲ್, ಡೀಸೆಲ್ ಮತ್ತು ಎಲ್ ಪಿ ಜಿ ಬೆಲೆಗಳನ್ನು ಕೂಡಲೆ ಇಳಿಸಬೇಕೆಂಬ ಕೂಗು ಎದ್ದಿದೆ.

ಜನತೆಯ ದನಿಗೆ ರಾಜಕೀಯ ಪಕ್ಷಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ. ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲಗಳ ದರ ಏರಿಕೆ ವಿರೋಧಿಸಿ ಜಿಲ್ಲಾ ಜನತಾದಳದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲಾ ಜೆಡಿಎಸ್ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದು, ತೈಲೋತ್ಪನ್ನಗಳ ಬೆಲೆ ಮಾತ್ರವಲ್ಲ ಎಲ್ಲ ಅಗತ್ಯ ವಸ್ತುಗಳ ಬೆಲೆ ಇಳಿಕೆ ಆಗಬೇಕು ಎಂದು ವಿನಂತಿಸಿಕೊಂಡಿದ್ದಾರೆ.

ವಾಂತಿ, ಬೇಧಿಯಿಂದ ಇಬ್ಬರ ಸಾವು :
ಕೂಡ್ಲಿಗಿ ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ ಕಾಣಿಸಿಕೊಂಡಿರುವ ವಾಂತಿ - ಬೇಧಿ ಪ್ರಕರಣದಲ್ಲಿ ಇಬ್ಬರು ಮೃತಪಟ್ಟು, 43 ಜನರಿಗೆ ಕಾಲರಾದಿಂದ ಬಳಲುತ್ತಿದ್ದಾರೆ.

ಮೃತರನ್ನು ಗೋಣೆಪ್ಪ (85) ಮತ್ತು ಚಿನ್ನಮ್ಮ (45) ಗುರುತಿಸಲಾಗಿದೆ. ಗೋಣೆಪ್ಪ ಮಂಗಳವಾರ ಸಂಜೆ ಮೃತಪಟ್ಟಿದ್ದಾನೆ. ಚಿನ್ನಮ್ಮ ಬುಧವಾರ ಬೆಳಗಿನ ಜಾವ ಸಾವಿಗೀಡಾಗಿದ್ದಾಳೆ. ಹೆಚ್ಚುತ್ತಿರುವ ಇಂತಹ ಪ್ರಕರಣಗಳಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿ ಆಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X