ಗೋವುಗಳು ಹಿಂದು ಧರ್ಮದ ಸಂಕೇತ : ಚಿಮೂ

ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ ಗೋವಂಶ ಜಾನುವಾರು ಹತ್ಯೆ ನಿಷೇಧ ಕಾನೂನು ಜಾರಿಗೆ ಆಗ್ರಹಿಸಿ ಶುಕ್ರವಾರ ಆದಿಚುಂಚನಗಿರಿ ಮಠದಲ್ಲಿ ಚಾಲನೆ ಗೋವಂಶ ರಕ್ಷಾ ಸಂದೇಶ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಗೋಹತ್ಯೆ ನಿಷೇಧ ಕಾನೂನಿಗೆ ಅನಂತಮೂರ್ತಿ ವಿರೋಧಿಸುತ್ತಿದ್ದಾರೆ. ಸಂವಿಧಾನದ 48ನೇ ವಿಧಿಯಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಮಾಡಬೇಕು ಎಂದು ಹೇಳಿದೆ. ಗುಜರಾತ್ ಗೋಹತ್ಯೆ ನಿಷೇಧ ಮಾಡಿದಾಗ ಸುಪ್ರಿಂಕೋರ್ಟ್ ನ ಏಳು ನ್ಯಾಯಮೂರ್ತಿಗಳ ಪೀಠ ಅದನ್ನು ಬೆಂಬಲಿಸಿದೆ ಎಂದು ಅವರು ವಿವರಿಸಿದರು.
ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಯಾಗಬೇಕು ಎಂದು ಆದಿಚುಂಚನಗಿರಿ ಸ್ವಾಮೀಜಿ ಸರಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಕೋಲಾರದಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವವರನ್ನು ಮರಳಿ ಹಿಂದು ಧರ್ಮಕ್ಕೆ ಕರೆತರುವಲ್ಲಿ ಕೆಲ ಮಟ್ಟಿಗೆ ಯಶಸ್ಸು ಗಳಿಸಿದ್ದಾರೆ. ಅವರು ಪೂರ್ಣ ಮಟ್ಟದಲ್ಲಿ ಈ ಕೆಲಸ ಮಾಡಬೇಕು ಎಂದು ಚಿಮೂ ಅವರಿಗೆ ಮನವಿ ಮಾಡಿಕೊಂಡರು.












Click it and Unblock the Notifications