ಭಾರತ್ ಬಂದ್ ರಾಜ್ಯಾದ್ಯಂತ ಉತ್ತಮ ಬೆಂಬಲ
ಬೆಂಗಳೂರು,
ಜು. 5 : ತೈಲ ಬೆಲೆ ಏರಿಕೆ ವಿರೋಧಿಸಿ ನೀಡಲಾಗಿರುವ ಭಾರತ್ ಬಂದ್ ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದಾರೆ, ಶಾಲಾ ಕಾಲೇಜುಗಳಿಗೆ ರಾಜ್ಯಾದ್ಯಂತ ರಜೆ ಘೋಷಿಸಲಾಗಿದೆ. ನಗರದ ಬಹುತೇಕ ಐಟಿ ಕಂಪನಿಗಳು ಸೂಟಿ ಮಾಡಿವೆ. ಕೆಎಸ್ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರವನ್ನು ರದ್ದಗೊಳಿಸಲಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. id="toptextpromo">ಬಿಜೆಪಿ
ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ರೈಲ್ವೆ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರು ಬೆಂಗಳೂರು-ಚೆನ್ನೈ ಶತಾಬ್ಧಿ, ಮೈಸೂರು-ಚಾಮರಾಜನಗರ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಕೇಂದ್ರ ಸರಕಾರಕ್ಕೆ ಸೇರಿದ ಕಚೇರಿಗಳ ಮೇಲೊ ಪ್ರತಿಭಟನಾಕಾರರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಹುಬ್ಬಳ್ಳಿ, ಬಳ್ಳಾರಿ, ಮಂಗಳೂರಿನಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ಬೆಂಗಳೂರಿನ
ಮೈಸೂರು ರಸ್ತೆ, ಯಲಹಂಕ, ಹೆಬ್ಬಾಳ, ನೆಲಮಂಗಲ ಬಳಿ ಬಸ್ ಕಲ್ಲು ತೂರಾಟ ನಡೆಸಲಾಗಿದೆ. ಸುಮಾರು 30ಕ್ಕೂ ಹೆಚ್ಚು ಬಸ್ ಗಳ ಜಖಂಗೊಂಡಿವೆ. ಹುಬ್ಬಳ್ಳಿ, ಬೆಳಗಾವಿ, ಮಂಗಳೂರು, ಮೈಸೂರು, ಗುಲ್ಬರ್ಗಾ, ಬೀದರ್ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಉತ್ತಮ ಬೆಂಬಲ ವ್ಯಕ್ತವಾಗಿದೆ.











Click it and Unblock the Notifications