ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಡಗಿನಲ್ಲಿ ಡಿಕೆ ಶಿವಕುಮಾರ್ ಸಂಚಾರ ಬಂದ್

By * ಬಿ.ಎಂ.ಲವಕುಮಾರ್, ಮೈಸೂರು
|
Google Oneindia Kannada News

Bharat Bandh success in Kodagu
ಮಡಿಕೇರಿ, ಜು.6: ಕೇಂದ್ರದ ಯುಪಿಎ ಸರ್ಕಾರ ಇಂಧನ ಬೆಲೆ ಏರಿಸಿರುವುದನ್ನು ಖಂಡಿಸಿ ಎಡ ಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಕೊಡಗಿನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆಯುವುದರೊಂದಿಗೆ ಯಾವುದೇ ಅಹಿತಕರ ಘಟನೆ ನಡೆಯದೆ ಯಶಸ್ವಿಯಾಗಿದೆ. ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಕಾರನ್ನು ಪ್ರತಿಭಟನಾಕಾರರು ತಡೆಗಟ್ಟಿದ ಘಟನೆಯೂ ನಡೆದಿದೆ.

ಬೆಳಿಗ್ಗೆಯಿಂದಲೇ ಆಟೋ, ಖಾಸಗಿ ಬಸ್‌ಗಳು ರಸ್ತೆಗೆ ಇಳಿಯದ್ದರಿಂದಾಗಿ, ಅಲ್ಲದೆ, ಛೇಂಬರ್ ಆಫ್ ಕಾಮರ್ಸ್ ಬೆಂಬಲ ಸೂಚಿಸಿದ್ದರಿಂದಾಗಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರಿಂದ ಜಿಲ್ಲೆಯ ಮಡಿಕೇರಿ, ವೀರಾಜಪೇಟೆ ಹಾಗೂ ಸೋಮವಾರಪೇಟೆ ಸೇರಿದಂತೆ ಎಲ್ಲಾ ಪಟ್ಟಣಗಳು ಬಿಕೋ ಎನ್ನುತ್ತಿದ್ದವು.

ಮಡಿಕೇರಿಯಲ್ಲಿ ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ತೆರಳುತ್ತಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರನ್ನು ಪ್ರತಿಭಟನಾಕಾರರು ತಡೆದ ಪ್ರಸಂಗವೂ ನಡೆಯಿತು ಬಳಿಕ ಪೊಲೀಸರ ಮಧ್ಯ ಪ್ರವೇಶದಿಂದ ಕಾರನ್ನು ಬಿಡಲಾಯಿತು.

ಕುಶಾಲನಗರದಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಹೊರ ಜಿಲ್ಲೆಗಳಿಂದ ಬರುತ್ತಿದ್ದ ವಾಹನಗಳನ್ನು ಪ್ರವೇಶ ದ್ವಾರದಲ್ಲಿಯೇ ಪ್ರತಿಭಟನಾಕಾರರು ತಡೆಯುತ್ತಿದ್ದದ್ದು ಕಂಡು ಬಂದಿತು.

ಸೋಮವಾರಪೇಟೆಯಲ್ಲಿಯೂ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ಸಂತೆ ದಿನವಾದ್ದರಿಂದ ಹಳ್ಳಿಗಳಿಂದ ತರಕಾರಿ ಮುಂತಾದವುಗಳನ್ನು ತಂದಿದ್ದ ರೈತರು ಜನರಿಲ್ಲದೆ ಹಿಡಿ ಶಾಪ ಹಾಕುತ್ತಾ ಮನೆಯತ್ತ ತೆರಳುತ್ತಿದ್ದದ್ದು ಕಂಡು ಬಂತು.

ವೀರಾಜಪೇಟೆಯಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ಕಂಡುಬಂತು. ಪಟ್ಟಣದಲ್ಲಿ ಜನಸಂಚಾರ ವಿರಳವಾಗಿತ್ತು. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X