ಸಿಇಟಿ ಕೌನ್ಸೆಲಿಂಗ್ ಮತ್ತೆ ಮುಂದಕ್ಕೆ
ಬೆಂಗಳೂರು,
ಜು. 6 : ಕೆಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಒಟ್ಟು 24 ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲದಿಂದ ಇದೇ 7 ರಂದು ನಡೆಯಬೇಕಿದ್ದ ಇಂಜಿನಿಯರಿಂಗ್ ಕೋರ್ಸ್ ಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. id="toptextpromo">ಎರಡನೇ
ಬಾರಿ ಕೌನ್ಸೆಲಿಂಗ್ ಮುಂದಕ್ಕೆ ಹೋಗಿರುವುದರಿಂದ ಪೋಷಕರು, ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಪಡೆಯುವ ಅವಕಾಶದಿಂದ ಪ್ರತಿಭಾವಂಚ ವಿದ್ಯಾರ್ಥಿಗಳು ವಂಚಿತರಾಗಬಾರದು ಎಂಬ ಕಾರಣದಿಂದ ಸಿಇಟಿ ಕೌನ್ಸೆಲಿಂಗ್ ಮುಂದೂಡಲಾಗಿದೆ. ಈಗಿನ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಜುಲೈ 14 ರಂದು ಕೌನ್ಸೆಲಿಂಗ್ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>24
ಕಾಲೇಜುಗಳ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಅಖಿಲ ಭಾರತ ತಾಂತ್ರಿಕ ಮಂಡಳಿ (ಎಐಸಿಟಿಇ) ನೀಡಿಲ್ಲ. ಅಲ್ಲ13 ಕಾಲೇಜುಗಳ ಸೀಟುಗಳ ಸಂಖ್ಯೆಗೆ ಸಂಬಂಧಿಸಿದಂತೆ ಭಾಗಶಃ ಮಾಹಿತಿ ಬಂದಿದೆ. ಕಳೆದ ವರ್ಷ 167 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸಿಇಟಿ ಕೋಟಾದಲ್ಲಿ 36,524 ಸೀಟುಗಳು ಲಭ್ಯವಿದ್ದವು. ಆದರೆ, ಈ ವರ್ಷ 148 ಕಾಲೇಜುಗಳಲ್ಲಿ 30,512 ಸೀಟುಗಳು ಲಭ್ಯವಾಗಲಿವೆ ಎಂದು ಅರವಿಂದ ಲಿಂಬಾವಳಿ ವಿವರಿಸಿದರು.











Click it and Unblock the Notifications