ರಾಜೀನಾಮೆ ವಾಪಸ್ ಪಡೆದ ಸಂತೋಷ

Santosh Hegde
ಬೆಂಗಳೂರು, ಜು. 7 : ಸರಕಾರದ ಕ್ರಮ ವಿರೋಧಿಸಿ ಲೋಕಾಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಲೋಕಾಯುಕ್ತ ನ್ಯಾ. ಎನ್ ಸಂತೋಷ ಹೆಗ್ಡೆ ಅವರು ಬುಧವಾರ ರಾಜಭವನಕ್ಕೆ ತೆರಳಿ ರಾಜೀನಾಮೆ ವಾಪಸ್ ಪಡೆದುಕೊಂಡಿದ್ದಾರೆ.

ಕಳೆದ ಶನಿವಾರ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ (ಜನತೆಯ ಮನವಿ ಕೂಡಾ) ಮನವಿ ಮೇರೆಗೆ ರಾಜೀನಾಮೆ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದ್ದರು. ಇಂದು ನೇರವಾಗಿ ರಾಜಭವನಕ್ಕೆ ಆಗಮಿಸಿದ ಸಂತೋಷ ಹೆಗ್ಡೆ ಅವರು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ವಾಪಸ್ ಪಡೆದುಕೊಂಡರು. ನಂತರ ಲೋಕಾಯುಕ್ತ ಕಚೇರಿಗೆ ಆಗಮಿಸಿದ ಮತ್ತೆ ಅಧಿಕಾರ ತೆಗೆದುಕೊಂಡರು.

ಸರಕಾರ ವಿಫಲ

ಲೋಕಾಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಸೂಕ್ತ ನಿರ್ಧಾರಕ್ಕೆ ಬರಲು ಸರಕಾರ ವಿಫಲವಾಗಿದೆ. ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, ಕೂಲಂಕಷಃ ಚರ್ಚೆ ನಡೆಸಲಾಗಿದೆ. ಸಚಿವ ಸಂಪುಟದಲ್ಲಿ ಈ ಬಗ್ಗೆ ಅಂತಿಮ ನಿರ್ಣಯಕ್ಕೆ ಬರಲಾಗುವುದು ಎಂದಿದ್ದಾರೆ. ಆದರೆ, ಇಂದು ನಡೆಯಬೇಕಿದ್ದ ಸಂಪುಟ ಸಭೆಯನ್ನು ಮುಂದೂಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+