ಮಾದರಿ ನಗರವಾಗಿ ಶಿವಮೊಗ್ಗ : ಬಿವೈ ರಾಘವೇಂದ್ರ

BY Raghavendra, Shivamogga MP
ಶಿವಮೊಗ್ಗ, ಜು. 10 : ನಗರದಲ್ಲಿ ಹಲವು ರೀತಿಯ ಅಭಿವೃದ್ಧಿ ಕಾರ್ಯಗಳು ಈಗಾಗಲೇ ಮುಗಿಯುವ ಹಂತದಲ್ಲಿದ್ದು, ಇನ್ನೂ ಹಲವು ರೀತಿಯ ಅಭಿವೃದ್ಧಿಯ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ಮಾಡಲಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಸಂಸದರ ಅನುದಾನದಲ್ಲಿ ಹಳೇ ಜಿಲ್ಲಾಧಿಕಾರಿ ಕಛೇರಿ ಎದುರು ಹಾಗೂ ಹೋಟೆಲ್ ಮಥುರಾ ಪ್ಯಾರಡೈಸ್ ಹತ್ತಿರ ನಿರ್ಮಾಣ ಗೊಂಡಿರುವ ಬಸ್ ತಂಗುದಾಣದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಈಗಾಗಲೇ ನಗರದಲ್ಲಿ ಸಂಸದರ ಅನುದಾನದಲ್ಲಿ ನಾಲ್ಕು ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಇನ್ನೂ ನಗರದ ಹಲವು ಭಾಗಗಳಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬಸ್ ತಂಗುದಾಣವನ್ನು ನಿರ್ಮಿಸಲಾಗುವುದು. ಇದರ ಜೊತೆಗೆ, ನಗರದ ಏಕೈಕ ದೊಡ್ಡ ಉದ್ಯಾನವನ ಎನಿಸಿಕೊಂಡಿರುವ ಗಾಂಧಿ ಪಾರ್ಕ್ ಅಭಿವೃದ್ಧಿಯಲ್ಲಿ ಕುಂಠಿತಗೊಂಡಿದ್ದು, ಮುಂದಿನ ದಿನಗಳಲ್ಲಿ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅಲ್ಲದೇ, ಈಗಿರುವ ಮಕ್ಕಳ ಪುಟಾಣಿ ರೈಲನ್ನು ಶೀಘ್ರದಲ್ಲಿಯೇ ಪುನರಾರಂಭಿಸಲಾಗುವುದು ಎಂದರು.

ನಗರದ ಇನ್ನೆರಡು ಭಾಗಗಳಲ್ಲಿ ಉದ್ಯಾನವನ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗಿದ್ದು, ಸದ್ಯದಲ್ಲಿಯೇ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರಲ್ಲದೇ, ನಗರವನ್ನು ಮಾದರಿಯನ್ನಾಗಿ ಮಾಡುವ ಉದ್ದೇಶವನ್ನು ಹೊಂದಿದ್ದು, ನಗರದ ಸೌಂದರ್ಯವನ್ನು ಹೆಚ್ಚಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+