ಜುಲೈ 31ರಂದು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಇಟಿ
ಬೆಂಗಳೂರು,
ಜು.10: ಡಿಪ್ಲೊಮಾ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಅಡಿಯಲ್ಲಿ ಬಿ.ಇ ಮೂರನೇ ಸೆಮಿಸ್ಟರ್ ಗೆ ನೇರ ಪ್ರವೇಶಕ್ಕೆ ಸಂಬಂಧಿಸಿದ ಅರ್ಜಿ ಮತ್ತು ಕೈಪಿಡಿಯನ್ನು ಜುಲೈ 10ರಿಂದ ಎಲ್ಲ ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ವಿತರಿಸಲಾಗುತ್ತದೆ. ಈ ಮೂಲಕ ಹಗಲು ಮತ್ತು ಸಂಜೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2010-11ನೇ ಸಾಲಿನಲ್ಲಿ ಡಿಪ್ಲೊಮಾ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. id="toptextpromo">ಭರ್ತಿ
ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಜುಲೈ 24 ಕೊನೆಯ ದಿನ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರು.650, ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ ರು.500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಜುಲೈ 31ರಂದು ಮಾಧ್ಯಹ್ನ ಎರಡು ಗಂಟೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. id='are-slot-1' class='oiad oi-axt oiadv'> id='top-searched-articles'>ಅರ್ಜಿ
ಶುಲ್ಕಕ್ಕೆ ಸಂಬಂಧಿಸಿದ ಡಿಡಿಯನ್ನು ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಪಡೆಯಬೇಕು. ಹೆಚ್ಚ್ಚಿನ ವಿವರಗಳಿಗೆ ನಿರ್ದೇಶಕರು, ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ, ಅರಮನೆ ರಸ್ತೆ, ಬೆಂಗಳೂರು-01 ಅಥವಾ ಸಮೀಪದ ಸರ್ಕಾರಿ ಪಾಲಿಟೆಕ್ನಿಕ್ ಗಳನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು : 2226 6184, 2226 6185, 2225 0657.











Click it and Unblock the Notifications