ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 31ರಂದು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಇಟಿ

By Rajendra
|
Google Oneindia Kannada News

CET for diploma holders on July 31
ಬೆಂಗಳೂರು, ಜು.10: ಡಿಪ್ಲೊಮಾ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಅಡಿಯಲ್ಲಿ ಬಿ.ಇ ಮೂರನೇ ಸೆಮಿಸ್ಟರ್ ಗೆ ನೇರ ಪ್ರವೇಶಕ್ಕೆ ಸಂಬಂಧಿಸಿದ ಅರ್ಜಿ ಮತ್ತು ಕೈಪಿಡಿಯನ್ನು ಜುಲೈ 10ರಿಂದ ಎಲ್ಲ ಸರ್ಕಾರಿ ಪಾಲಿಟೆಕ್ನಿಕ್ ಗಳಲ್ಲಿ ವಿತರಿಸಲಾಗುತ್ತದೆ. ಈ ಮೂಲಕ ಹಗಲು ಮತ್ತು ಸಂಜೆ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 2010-11ನೇ ಸಾಲಿನಲ್ಲಿ ಡಿಪ್ಲೊಮಾ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸ್ವೀಕರಿಸಲು ಜುಲೈ 24 ಕೊನೆಯ ದಿನ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರು.650, ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ ರು.500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಜುಲೈ 31ರಂದು ಮಾಧ್ಯಹ್ನ ಎರಡು ಗಂಟೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.

ಅರ್ಜಿ ಶುಲ್ಕಕ್ಕೆ ಸಂಬಂಧಿಸಿದ ಡಿಡಿಯನ್ನು ಕಾರ್ಯ ನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಪಡೆಯಬೇಕು. ಹೆಚ್ಚ್ಚಿನ ವಿವರಗಳಿಗೆ ನಿರ್ದೇಶಕರು, ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ, ಅರಮನೆ ರಸ್ತೆ, ಬೆಂಗಳೂರು-01 ಅಥವಾ ಸಮೀಪದ ಸರ್ಕಾರಿ ಪಾಲಿಟೆಕ್ನಿಕ್ ಗಳನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು : 2226 6184, 2226 6185, 2225 0657.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X