ಗುಂಡ್ಯ ಜಲವಿದ್ಯುತ್ ಯೋಜನೆಗೆ ಗ್ರೀನ್ ಸಿಗ್ನಲ್

ಪರಿಣಾಮವಾಗಿ ಯೋಜನೆಯ ಮೂಲ ಉದ್ದೇಶದಂತೆ 200 ಮೆ.ವ್ಯಾ ವಿದ್ಯುತ್ ಉತ್ಪಾದನೆಗೆ ಯಾವುದೇ ರೀತಿಯ ತೊಡಕು ಉಂಟಾಗುವುದಿಲ್ಲ. ಆದರೆ, ಹೊಂಗಡಹಳ್ಳ ಡ್ಯಾಂ ನಿರ್ಮಾಣಕ್ಕೆ ಅನುಮತಿ ಇಲ್ಲದಿರುವುದರಿಂದ ಹೆಚ್ಚಿನ ನೀರು ಸಂಗ್ರಹಿಸಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ, ನದಿಯಲ್ಲಿ ನೀರಿರುವಷ್ಟು ದಿನ ವಿದ್ಯುತ್ ಉತ್ಪಾದಿಸಿ, ನೀರಿಲ್ಲದಾಗ ಯೋಜನೆ ನಿಲ್ಲಿಸಬೇಕಾಗುತ್ತದೆ.
ಸುಮಾರು 800 ಕೋಟಿ ರು ವೆಚ್ಚದ ಈ ಜಲವಿದ್ಯುತ್ ಯೋಜನೆಯಲ್ಲಿ ಎರಡು 200 ಮೆ.ವ್ಯಾ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕಗಳು ಮಳೆಗಾಲದಲ್ಲಿ ಮಾತ್ರ ಕಾರ್ಯ ನಿರ್ವಹಿಸಲಿದೆ.
ಹೊಂಗಡಹಳ್ಳಡ್ಯಾಂ ನಿರ್ಮಿಸುವುದರಿಂದ ಅಪಾರ ಪ್ರಮಾಣದ ಅರಣ್ಯ ಪ್ರದೇಶ ನಾಶವಾಗುತ್ತದೆ. ಶಿರಾಡಿ ಘಾಟ್, ಕೆಂಪು ಹೊಳೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿನ ಜೀವ ವೈವಿಧ್ಯತೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.












Click it and Unblock the Notifications