ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಂಡ್ಯ ಜಲವಿದ್ಯುತ್ ಯೋಜನೆಗೆ ಗ್ರೀನ್ ಸಿಗ್ನಲ್

By Mahesh
|
Google Oneindia Kannada News

Govt Okays Gundia Hydel Power Project
ನವದೆಹಲಿ, ಜು.13:ಬಹು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಗುಂಡ್ಯ ಜಲವಿದ್ಯುತ್ ಯೋಜನೆಗೆ ಕೇಂದ್ರ ಸರ್ಕಾರ ಕೊನೆಗೂ ಅನುಮತಿ ನೀಡಿದೆ. ಹೆಚ್ಚು ಭೂ ಪ್ರದೇಶ ಮುಳುಗಡೆಗೆ ಕಾರಣವಾಗುತ್ತಿದ್ದ ಹೊಂಗಡಹಳ್ಳ ಡ್ಯಾಂ ನಿರ್ಮಾಣ ಪ್ರಸ್ತಾಪ ಕೈಬಿಡಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಅನುಮತಿ ದೊರೆತಿದೆ.

ಪರಿಣಾಮವಾಗಿ ಯೋಜನೆಯ ಮೂಲ ಉದ್ದೇಶದಂತೆ 200 ಮೆ.ವ್ಯಾ ವಿದ್ಯುತ್ ಉತ್ಪಾದನೆಗೆ ಯಾವುದೇ ರೀತಿಯ ತೊಡಕು ಉಂಟಾಗುವುದಿಲ್ಲ. ಆದರೆ, ಹೊಂಗಡಹಳ್ಳ ಡ್ಯಾಂ ನಿರ್ಮಾಣಕ್ಕೆ ಅನುಮತಿ ಇಲ್ಲದಿರುವುದರಿಂದ ಹೆಚ್ಚಿನ ನೀರು ಸಂಗ್ರಹಿಸಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ, ನದಿಯಲ್ಲಿ ನೀರಿರುವಷ್ಟು ದಿನ ವಿದ್ಯುತ್ ಉತ್ಪಾದಿಸಿ, ನೀರಿಲ್ಲದಾಗ ಯೋಜನೆ ನಿಲ್ಲಿಸಬೇಕಾಗುತ್ತದೆ.

ಸುಮಾರು 800 ಕೋಟಿ ರು ವೆಚ್ಚದ ಈ ಜಲವಿದ್ಯುತ್ ಯೋಜನೆಯಲ್ಲಿ ಎರಡು 200 ಮೆ.ವ್ಯಾ ಸಾಮರ್ಥ್ಯದ ವಿದ್ಯುತ್ ಉತ್ಪಾದನಾ ಘಟಕಗಳು ಮಳೆಗಾಲದಲ್ಲಿ ಮಾತ್ರ ಕಾರ್ಯ ನಿರ್ವಹಿಸಲಿದೆ.

ಹೊಂಗಡಹಳ್ಳಡ್ಯಾಂ ನಿರ್ಮಿಸುವುದರಿಂದ ಅಪಾರ ಪ್ರಮಾಣದ ಅರಣ್ಯ ಪ್ರದೇಶ ನಾಶವಾಗುತ್ತದೆ. ಶಿರಾಡಿ ಘಾಟ್, ಕೆಂಪು ಹೊಳೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿನ ಜೀವ ವೈವಿಧ್ಯತೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X