ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ

Kalasipalya Bus Stand to get facelift
ಬೆಂಗಳೂರು, ಜು.14: ಸುಮಾರು 80 ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ನೀಡಲು ಸರ್ಕಾರ ಮುಂದಾಗಿದೆ. ಇನ್ನೆರಡು ವರ್ಷಗಳಲ್ಲಿ ಕಲಾಸಿ ಪಾಳ್ಯದ ನಿಲ್ದಾಣಕ್ಕೆ ಹೊಸ ರೂಪ ನೀಡಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸುವುದಾಗಿ ಸಚಿವ ಆರ್. ಅಶೋಕ್ ತಿಳಿಸಿದರು.

ಮಂಗಳವಾರ ಕಲಾಸಿಪಾಳ್ಯ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲಿನ ದುರ್ನಾತಕ್ಕೆ ಮುಖ ಕಿವಿಚಿಕೊಂಡ ಸಚಿವರು ಸುಮಾರು 300 ಕೋಟಿ ರುಪಾಯಿ ವೆಚ್ಚದಲ್ಲಿ ನಗರದ ಕಲಾಸಿಪಾಳ್ಯ ಬಸ್ ನಿಲ್ದಾಣ ನಿರ್ಮಾಣ ಮಾಡುವುದಾಗಿ ಹೇಳಿದರು.

ಕಳೆದ 20-30 ವರ್ಷಗಳಿಂದ ಕಲಾಸಿಪಾಳ್ಯದಲ್ಲಿ ನೂತನ ಬಸ್ ನಿಲ್ದಾಣ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿದ್ದು ಶೀಘ್ರವೇ ನಿಲ್ದಾಣ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಈ ಭಾಗದಲ್ಲಿ ಪಾಲಿಕೆಗೆ ಸೇರಿದ 5.1 ಎಕರೆ ಭೂಮಿಯಲ್ಲಿ ಸುಸಜ್ಜಿತವಾದ, ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ವ್ಯಾಪರಿಗಳೇ ಭಯ ಬೇಡ: ನೂತನ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಬುಕ್ಕಿಂಗ್ ಕೇಂದ್ರಗಳಿದ್ದು, ಅವುಗಳಿಗೂ ಸಹ ಸೂಕ್ತ ಸ್ಥಳಾವಕಾಶ ಮಾಡಿಕೊಡಲಾಗುವುದು.

ವ್ಯಾಪಾರಿಗಳ ಅಗತ್ಯಕ್ಕನುಗುಣವಾಗಿ ವಾಣಿಜ್ಯ ಕಟ್ಟಡವನ್ನೂ ನಿರ್ಮಿಸುವುದು ಎಂದ ಸಚಿವರು, ನಿಲ್ದಾಣದ ನಿರ್ಮಾಣದ ಸಂಪೂರ್ಣ ನಿರ್ವಹಣೆಯನ್ನು ಬಿಎಂಟಿಸಿ ಸಂಸ್ಥೆಯೇ ವಹಿಸಿಕೊಳ್ಳಲಿದ್ದು ಬಿಬಿಎಂಪಿಯೊಂದಿಗೆ ಒಪ್ಪಂದ ಮಾಡಕೊಳ್ಳಲಾಗುವುದು ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+